ಶಿವಮೊಗ್ಗ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇನ್ನು ಕೆಲವೇ ದಿನಗಳಲ್ಲಿ ಪರೀಕ್ಷೆ ಇರುವುದರಿಂದ ಅವಕಾಶ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು. ಬಳಿಕ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಶಿವಮೊಗ್ಗ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಲು ಪ್ರತಿಭಟನೆ - Give permission to write test for wearing hijab
ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ. ಪದವಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಯಿತು.
![ಶಿವಮೊಗ್ಗ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಲು ಪ್ರತಿಭಟನೆ Give permission to write test for wearing hijab Protest](https://etvbharatimages.akamaized.net/etvbharat/prod-images/768-512-14813550-thumbnail-3x2-bng.jpg)
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿ ಎಂದು ಪ್ರತಿಭಟನೆ
ನ್ಯಾಯಾಲಯದ ಆದೇಶ ಪಿಯುಸಿ ತರಗತಿಗಳಿಗೆ ಮಾತ್ರ ಇದೆ. ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಪದವಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಇಂಟರ್ನಲ್ ಪರೀಕ್ಷೆಗಳಿಗೂ ಅವಕಾಶ ನೀಡಬೇಕು ಎಂದು ಇದೇ ವೇಳೆ ಆಗ್ರಹಿಸಿದರು.
ಇದನ್ನೂ ಓದಿ:ಹೆಸರಿಲ್ಲದೆ ಬ್ಯಾನರ್ ಹಾಕುವವರು ಹೇಡಿಗಳು, ಕ್ರೂರಿಗಳು ಎಂದ ಪ್ರತಿಪಕ್ಷದ ಉಪ ನಾಯಕಖಾದರ್.. ಸದನದಲ್ಲಿ ಕೋಲಾಹಲ!