ಚಿಕ್ಕಮಗಳೂರು/ಶಿವಮೊಗ್ಗ: ದೇಶ ವಿರೋಧಿ ಘೋಷಣೆ ಕೂಗಿದ ಅಮೂಲ್ಯಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ನಡೆಸಿತು. ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿದ ಬಿಜೆಪಿ ಕಾರ್ಯಕರ್ತರು, ಅಮೂಲ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯಳನ್ನು ಗಲ್ಲಿಗೇರಿಸುವ ಮೂಲಕ ದೇಶದ್ರೋಹಿಗಳಿಗೆ ತಕ್ಕ ಸಂದೇಶ ರವಾನಿಸಬೇಕು. ವೋಟ್ ಬ್ಯಾಂಕ್ ರಾಜಕಾರಣವನ್ನು ಬದಿಗಿಟ್ಟು ದೇಶದ ಉನ್ನತಿಗಾಗಿ ಮಾಡಲಾದ ಕಾಯ್ದೆಯನ್ನು ಪ್ರತಿಯೊಬ್ಬ ಭಾರತೀಯರು ಗೌರವಿಸಬೇಕು. ಆದರೆ ಇದರ ವಿರುದ್ಧ ನಡೆಯುವ ಸಭೆಗಳು ದೇಶ ವಿರೋಧಿಗಳಿಗೆ ಉತ್ತಮ ವೇದಿಕೆಯಾಗಿವೆ. ಪಾಕಿಸ್ತಾನದ ಬಗ್ಗೆ ಕಾಳಜಿ ಇದ್ದರೆ ಪಾಕಿಸ್ತಾನಕ್ಕೆ ಹೋಗಲಿ. ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡವರಿಗೆ ಬೆಂಬಲ ನೀಡುವವರನ್ನೆಲ್ಲ ಮಂಪರು ಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.