ಕರ್ನಾಟಕ

karnataka

ETV Bharat / city

PSI ಮರು ಪರೀಕ್ಷೆಯ ದಿನಾಂಕ ಶೀಘ್ರದಲ್ಲೇ ಪ್ರಕಟ: ಆರಗ ಜ್ಞಾನೇಂದ್ರ - ಪಿಎಸ್​ಐ ಪರೀಕ್ಷೆ ರದ್ದು ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ

PSI ಮರು ಪರೀಕ್ಷೆಯ ದಿನಾಂಕ ಪ್ರಕಟ ಮಾಡುವುದಾಗಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪಿಎಸ್ಐ ಮರು ಪರೀಕ್ಷೆ
ಪಿಎಸ್ಐ ಮರು ಪರೀಕ್ಷೆ

By

Published : Apr 30, 2022, 1:13 PM IST

Updated : Apr 30, 2022, 1:24 PM IST

ಶಿವಮೊಗ್ಗ: ಶೀಘ್ರದಲ್ಲಿಯೇ PSI ಮರು ಪರೀಕ್ಷೆಯ ದಿನಾಂಕ ಪ್ರಕಟ ಮಾಡುವುದಾಗಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪಿಎಸ್ಐ ಪರೀಕ್ಷೆಯ ಅಕ್ರಮದ ಕುರಿತು ಒಂದೂಂದೇ ಅಂಶ ಹೊರಗೆ ಬರ್ತಾ ಇದೆ.‌ ಈಗಾಗಲೇ ಪ್ರಕರಣ ಸಂಬಂಧ ಅನೇಕರನ್ನು ಬಂಧಿಸಲಾಗಿದೆ.‌ ಪರೀಕ್ಷೆಯಲ್ಲಿ ಹೊಸ ಹೊಸ ಟೆಕ್ನಾಲಜಿ ಬಳಸಿ ಅಕ್ರಮ ಎಸಗಿದ್ದಾರೆ. ಈಗ ಮರು ಪರೀಕ್ಷೆ ಮಾಡುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ. ನಾವು ನೋಟಿಫಿಕೇಷನ್ ರದ್ದು ಮಾಡಿಲ್ಲ, ಪರೀಕ್ಷೆ ರದ್ದು ಮಾಡಿದ್ದೇವೆ. ಈಗಾಗಲೇ ಪರೀಕ್ಷೆ ಬರೆದಿದ್ದವರಿಗೆ ಮಾತ್ರ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

PSI ಮರು ಪರೀಕ್ಷೆಯ ದಿನಾಂಕ ಶೀಘ್ರದಲ್ಲೇ ಪ್ರಕಟ: ಆರಗ ಜ್ಞಾನೇಂದ್ರ

ಅಕ್ರಮ ಆಗಿರುವುದರಿಂದ ನಮ್ಮ ಕಣ್ಣು ತೆರೆದಂತೆ ಆಗಿದೆ. ಪ್ರತಿಭಾವಂತರಿಗೆ ಅವಕಾಶ ಸಿಗಬೇಕು ಎಂಬ ಕಾರಣದಿಂದ ಸರಿಯಾದ ರೀತಿಯಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದರು. ಈ ರೀತಿ ಪರೀಕ್ಷೆಯಲ್ಲಿ ವಂಚನೆ ಆಗುವುದನ್ನು ತಡೆಗಟ್ಟಲು ಕಾನೂನಿಗೆ ತಿದ್ದುಪಡಿ ತರಬೇಕು ಎನ್ನುವ ಚಿಂತನೆ ಇದೆ.‌ ತಪ್ಪಿತಸ್ಥರು ಜೈಲಿನಿಂದ ಹೊರಗೆ ಬರಬಾರದು. ಕಷ್ಟಪಟ್ಟು ಓದಿದವರಿಗೆ ಅನ್ಯಾಯವಾಗಬಾರದು.‌ ಹಣ ಕೊಟ್ಟು ಓದಿದವರಿಗೆ ನ್ಯಾಯಸಿಗಬೇಕು. ಹಣಕೊಟ್ಟು ಕೊಂಡುಕೊಳ್ಳುತ್ತೇನೆ ಎನ್ನುವವರು ತೊಲಗಬೇಕು. ಮರು ಪರೀಕ್ಷೆಯಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆ ಇರುವುದಿಲ್ಲ ಎಂದು ತಿಳಿಸಿದರು.

ಪ್ರಿಯಾಂಕ ಖರ್ಗೆಗೆ ತೀರುಗೇಟು:ಪ್ರಿಯಾಂಕ ಖರ್ಗೆ ಅವರು ಮಾಧ್ಯಮದವರ ಮುಂದೆ ಬಂದು ಮಾತನಾಡುತ್ತಿದ್ದಾರೆ. ಅದನ್ನು ಸಿಐಡಿ ಮುಂದೆ ಬಂದು ಹೇಳಬೇಕು. ಅವರು ತಮ್ಮ ದಾಖಲಾತಿಗಳನ್ನು ಸಿಐಡಿ ಮುಂದೆ ಬಂದು ನೀಡಲಿ. ಸಾಕ್ಷಿಗಳನ್ಜು ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿಸಿ ಅಂದ್ರೆ, ಬೆನ್ನು ತೋರಿಸಿ‌ ಪಲಾಯನ ಮಾಡುತ್ತಿದ್ದಾರೆ ಎಂದರು.

ಅಕ್ರಮ ಹಿನ್ನೆಲೆಯಲ್ಲಿ ಪಿಎಸ್​ಐ ಪರೀಕ್ಷೆ ರದ್ದುಗೊಳಿಸಿ, ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಮರು ಪರೀಕ್ಷೆಯ ನಿರ್ಧಾರಕ್ಕೆ ಪಿಎಸ್​ಐ ಆಗಿ ಆಯ್ಕೆ ಆದವರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನು ಓದಿ:ಪಿಎಸ್ಐ ಪರೀಕ್ಷೆ ಅಕ್ರಮ: ಮೊಬೈಲ್ ಒಡೆದು ಸಾಕ್ಷ್ಯ ನಾಶ ಪಡಿಸಿರುವ ದಿವ್ಯಾ

Last Updated : Apr 30, 2022, 1:24 PM IST

ABOUT THE AUTHOR

...view details