ಕರ್ನಾಟಕ

karnataka

ETV Bharat / city

ಮಳೆ ಅಬ್ಬರ: ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೂ ರಜೆ - ಶಿವಮೊಗ್ಗದಲ್ಲಿ ಶಾಲಾ ಕಾಲೇಜು ರಜೆ

ಮಳೆ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

rain
rain

By

Published : Jul 7, 2022, 10:46 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ವಿಪರೀತ ಮಳೆಯಾಗುವ ತಾಲೂಕುಗಳಾದ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕುಗಳ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಶುಕ್ರವಾರ ಸಹ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯಲ್ಲಿನ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3.5 ಅಡಿ ನೀರು ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತು ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

(ಇದನ್ನೂ ಓದಿ: ಬಿಡದ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ, ಶನಿವಾರ ಶಾಲಾ ಕಾಲೇಜುಗಳಿಗೆ ರಜೆ)

ABOUT THE AUTHOR

...view details