ಶಿವಮೊಗ್ಗ: ರಾಜ್ಯಾದ್ಯಂತ ಜನವರಿ 29ರಂದು ತೆರೆಕಂಡ 'ರಾಮಾರ್ಜುನ' ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು ಶಿವಮೊಗ್ಗಕ್ಕೆ ಆಗಮಿಸಿದ ಚಿತ್ರತಂಡ, ಭಾರತ್ ಸಿನಿಮಾಸ್ನಲ್ಲಿ ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಚಿತ್ರದ ನಾಯಕ ಅನೀಶ್ ತೇಜೇಶ್ವರ್ ಹಾಗೂ ನಾಯಕಿ ನಿಷ್ವಿಕ ನಾಯ್ಡು, ಶಿವಮೊಗ್ಗದಲ್ಲಿ ನಮ್ಮ ಚಿತ್ರ ಹೌಸ್ಫುಲ್ ಪ್ರದರ್ಶನ ಕಾಣುತ್ತಿರುವುದು ಸಂತಸ ತಂದಿದೆ. ರಾಜ್ಯದ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ.