ಶಿವಮೊಗ್ಗ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊನ್ನಾಳಿ ರಸ್ತೆಯ ಗೊಂದಿ ಚಟ್ನಳ್ಳಿ ಬಳಿ ನಡೆದಿದೆ.
ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು - today accident news
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊನ್ನಾಳಿ ರಸ್ತೆಯ ಗೊಂದಿ ಚಟ್ನಳ್ಳಿ ಬಳಿ ನಡೆದಿದೆ. ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಸ್ತೆ ಅಪಘಾತ
ಮುರುಗೇಶ್ (19) ಎಂಬಾತ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಈತ ಬುಳ್ಳಾಪುರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಶಿವಮೊಗ್ಗದಿಂದ ಬುಳ್ಳಾಪುರಕ್ಕೆ ವಾಪಸ್ ಆಗುವಾಗ ಈ ಘಟನೆ ನಡೆದಿದೆ.ಈ ಸಂಬಂಧ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.