ಶಿವಮೊಗ್ಗ: ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೈಕ್ಗೆ ಕ್ಯಾಂಟರ್ ಡಿಕ್ಕಿ: ವಿದ್ಯಾರ್ಥಿ ಸೇರಿ ಸ್ಥಳದಲ್ಲೇ ಇಬ್ಬರು ಸಾವು - ಹಾರನಹಳ್ಳಿ ಬೈಕ್ಗೆ ಕ್ಯಾಂಟರ್ ಡಿಕ್ಕಿ ಸುದ್ದಿ
ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೈಕ್ಗೆ ಕ್ಯಾಂಟರ್ ಡಿಕ್ಕಿ
ಹಾರನಹಳ್ಳಿ ಗ್ರಾಮದ ಕಾರ್ಪೆಂಟರ್ ಕೇಶವ (18) ಹಾಗೂ ಗಿರೀಶ್ (12) ಮೃತರು. ಆಯನೂರು ಕಡೆಗೆ ಬೈಕ್ನಲ್ಲಿ ಹೊರಟಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸಾವರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ಗಿರೀಶ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಯಾಂಟರ್ ಹಾಗೂ ಡ್ರೈವರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.