ಕರ್ನಾಟಕ

karnataka

ETV Bharat / city

ಮಾಜಿ ಸಚಿವ ಈಶ್ವರಪ್ಪ ನಿವಾಸಕ್ಕೆ ವಿವಿಧ ಮಠಾಧೀಶರು ಭೇಟಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮನೆಗೆ ವಿವಿಧ ಮಠಗಳ ಸ್ವಾಮೀಜಿಗಳು ಭೇಟಿ ನೀಡಿ ಧೈರ್ಯ ತುಂಬಿದ್ದಾರೆ.

Swamijis visits to KS Eshwarappa house at Shivamogga
ಈಶ್ವರಪ್ಪ ನಿವಾಸಕ್ಕೆ ವಿವಿಧ ಮಠಾಧೀಶರು ಭೇಟಿ

By

Published : Apr 16, 2022, 1:51 PM IST

ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆ‌ ಇಂದು ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ವಿವಿಧ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ. ಮಾದಾರ ಚೆನ್ನಯ್ಯ ಸ್ವಾಮೀಜಿ, ಕಾಗಿನೆಲೆಯ ನಿರಂಜನಾಂದಪುರಿ ಸ್ವಾಮೀಜಿ, ಪುರುಷೋತ್ತಮನಂದಪುರಿ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ ಸ್ವಾಮೀಜಿ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ನೀಡಿ ಈಶ್ವರಪ್ಪ ಜತೆ ಮಾತುಕತೆ ನಡೆಸಿದರು. ಅಲ್ಲದೇ, ಪ್ರಸ್ತುತ ಬೆಳವಣಿಗೆ ಬಗ್ಗೆ ಈಶ್ವರಪ್ಪ ಜತೆ ಚರ್ಚೆ ನಡೆಸಿ ಅವರಿಗೆ ವಿಚಲಿತರಾಗದಂತೆ ಧೈರ್ಯ ತುಂಬಿದ್ದಾರೆ.

ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪ್ರತಿ ಹುಣ್ಣಿಮೆಯ ದಿನ ಮನೆಯಲ್ಲಿ ವಿಶೇಷ ಪೂಜೆ ಇರುತ್ತದೆ. ಇಂದೂ ಹುಣ್ಣಿಮೆ ಪೂಜೆ ಜತೆಗೆ ಸತ್ಯನಾರಾಯಣ ಪೂಜೆ ಮಾಡುತ್ತಿದ್ದೆವು. ಇದೇ ವೇಳೆ 10ಕ್ಕೂ ಹೆಚ್ಚು ಶ್ರೀಗಳು ನಮ್ಮ ಮನೆಗೆ ಭೇಟಿ ಕೊಟ್ಟಿದ್ದಾರೆ. ಅವರುಗಳು ಬರುವ ಕಲ್ಪನೆ ಸಹ ನನಗೆ ಇರಲಿಲ್ಲ‌. ಪೂಜೆಯ ಸಮಯಕ್ಕೆ ದೇವರ ರೀತಿ ಬಂದು ಅವರೆಲ್ಲರೂ ಆಶೀರ್ವಾದ ಮಾಡಿದ್ದಾರೆ. ಯಾವ ಲೋಪವೂ ಇಲ್ಲದೇ, ನಿರ್ದೋಷಿಯಾಗಿ ಹೊರಗೆ ಬರ್ತೀರಾ ಎಂದು ಅಭಯ ನೀಡಿದ್ದಾರೆ ಎಂದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ನಾನೇನು ಕುಗ್ಗಿರಲಿಲ್ಲ. ನನಗೆ ಆನೆ ಬಲದಷ್ಟು ಧೈರ್ಯ ಬಂದಿದೆ. ಎಲ್ಲಾ ಶ್ರೀಗಳು ಅಶೀರ್ವಾದ ಮಾಡಿದ್ದು, ನನಗೆ ಪೂರ್ವ ಜನ್ಮದ ಪುಣ್ಯ. ಇದರ ಜೊತೆಗೆ ಮಂತ್ರಾಲಯದ ಶ್ರೀಗಳು ಕರೆ ಮಾಡಿದ್ದರು. ನೀವು ರಾಯರ ಭಕ್ತರು. ನಿಮಗೆ ಒಳ್ಳೆಯದಾಗುತ್ತೇ ಎಂದು ಹರಸಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.

ಇದನ್ನೂ ಓದಿ:ಈಶ್ವರಪ್ಪ ಬಂಧನಕ್ಕಾಗಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ.. ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿ

For All Latest Updates

ABOUT THE AUTHOR

...view details