ಶಿವಮೊಗ್ಗ:ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರದಲ್ಲಿ ನಗರದಲ್ಲಿ ವಿಧಿಸಲಾಗಿದ್ದ 144 ಸೆಕ್ಷನ್ ಅನ್ನು ಆಗಸ್ಟ್ 20 ರ ಬೆಳಗ್ಗೆ 6 ಗಂಟೆಯತನಕ ವಿಸ್ತರಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಸೋಮವಾರದಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಹಾಕಲಾಗಿತ್ತು. ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬೂದಿ ಮುಚ್ಚಿದ ಕೆಂಡದಂತಿದೆ. ಹಾಗಾಗಿ, ಮತ್ತೆರಡು ದಿನ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
ಚಾಕು ಇರಿದ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ಮತ್ತೆರಡು ದಿನ ವಿಸ್ತರಿಸಿ 5ನೇ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ. ಮಾಲ್ನಲ್ಲಿ ಗಲಾಟೆ ಮಾಡಿದ ಶರೀಫ್ ಎಂಬಾತನ ಪೊಲೀಸ್ ಕಸ್ಟಡಿಯನ್ನು ಎರಡನೇ ಜೆಎಂಎಫ್ಸಿ ನ್ಯಾಯಾಲಯ ವಿಸ್ತರಿಸಿದೆ.