ಶಿವಮೊಗ್ಗ: ನಗರದಲ್ಲಿ ಗುರುವಾರ ಬೆಳಗ್ಗೆ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಬಳಿಕ ಉಂಟಾಗಿದ್ದ ಎರಡು ಕೋಮುಗಳ ನಡುವಿನ ಗಲಾಟೆ ನಿಯಂತ್ರಿಸಲು ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ವಿಸ್ತರಿಸಿ ಶಿವಮೊಗ್ಗ ತಹಸೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಗಲಭೆ ಪ್ರಕರಣ: ಸೋಮವಾರದವರೆಗೂ ನಿಷೇಧಾಜ್ಞೆ ವಿಸ್ತರಣೆ - ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ
ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ನಗರದಲ್ಲಿ ಸೆಕ್ಷನ್ 144 ಹಾಗೂ ಕರ್ಫ್ಯೂ ಜಾರಿ ಮಾಡಲಾಗಿತ್ತು. ಇದೀಗ ಮತ್ತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಸೆಕ್ಷನ್ 144 ಮುಂದುವರೆಸಲಾಗಿದೆ.
ಕಳೆದ ಗುರುವಾರ ಮಧ್ಯಾಹ್ನದಿಂದ ಶನಿವಾರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಹೊರಡಿಸಲಾಗಿತ್ತು. ಆದರೆ ಮುಂಜಾಗ್ರತಾ ಕ್ರಮವಾಗಿ ಹಾಗೂ ಶಿವಮೊಗ್ಗದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ನಿಷೇಧಾಜ್ಞೆ ವಿಸ್ತರಿಸುವಂತೆ ಪೊಲೀಸ್ ಇಲಾಖೆ ತಹಸೀಲ್ದಾರ್ಗೆ ಪ್ರಸ್ತಾವನೆ ಸಲ್ಲಿಸಿತ್ತು. ಪೊಲೀಸ್ ಇಲಾಖೆಯ ಪ್ರಸ್ತಾವನೆ ಅಂಗೀಕರಿಸಿರುವ ತಹಸೀಲ್ದಾರ್ ನಾಗರಾಜ್, ನಿಷೇಧಾಜ್ಞೆಯನ್ನು ಸೋಮವಾರ ಬೆಳಗ್ಗೆ 10 ಗಂಟೆವರೆಗೂ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ಹಲ್ಲೆ ಪ್ರಕರಣ.. 10 ವಾರ್ಡ್ಗಳಿಗೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ನೇಮಕ