ಕರ್ನಾಟಕ

karnataka

ETV Bharat / city

ಡಿ.21 ರ ಮಧ್ಯರಾತ್ರಿವರೆಗೆ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ - ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

ದೇಶಾದ್ಯಂತ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

shivkumar K B
ಶಿವಕುಮಾರ್​ ಕೆ.ಬಿ

By

Published : Dec 18, 2019, 11:25 PM IST

ಶಿವಮೊಗ್ಗ: ದೇಶಾದ್ಯಂತ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಗುರುವಾರ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬಹೃತ್ ಪ್ರತಿಭಟನೆ ಸಹ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಡಿಸೆಂಬರ್ 18 ರ ರಾತ್ರಿ 10 ಗಂಟೆಯಿಂದ ಡಿ.21 ರ ಮಧ್ಯರಾತ್ರಿ ವರೆಗೆ ಕಲಂ 144ರ ಅಡಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details