ಮಂಗಳೂರು/ ಶಿವಮೊಗ್ಗ:ಶಿವಮೊಗ್ಗಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರನ್ನು ವರ್ಗಾವಣೆ ಮಾಡಿದ್ದು, ಇವರ ಜಾಗಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಕೆ.ಎಂ. ಶಾಂತರಾಜು ಅವರನ್ನು ಬೆಂಗಳೂರು ನಗರದ ಪೂರ್ವ ಟ್ರಾಫಿಕ್ ವಿಭಾಗದ ಡೆಪ್ಯೂಟಿ ಕಮಿಷನರ್ ಆಗಿ ನೇಮಿಸಲಾಗಿದೆ. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರನ್ನು ನೇಮಿಸಲಾಗಿದೆ.