ಶಿವಮೊಗ್ಗ: ಇತ್ತೀಚೆಗೆ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಮನೆಗೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಹರ್ಷನ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೂ ಸಹ ಹರ್ಷ ಅವರ ಮನೆಗೆ ಬರುತ್ತಾರೆ. ನಾಯಕರಿಬ್ಬರೂ ಈ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ನಮ್ಮ ನಾಯಕರು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.