ಕರ್ನಾಟಕ

karnataka

ETV Bharat / city

30 ವರ್ಷದ ನಂತರ ಕನ್ನಡ ಮಾತನಾಡುವಾಗ ರೋಮಾಂಚನವಾಗುತ್ತಿದೆ : ಆಂಧ್ರ ಸಚಿವ ಕಾಕನಿ ಗೋವರ್ಧನ ರೆಡ್ಡಿ - ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ನೆನಪಿನ ಅಂಗಳ 2022 ಕಾರ್ಯಕ್ರಮ

ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಏರ್ಪಡಿಸಿದ್ದ ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ - ನೆನಪಿನ ಅಂಗಳ 2022 ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಆಂಧ್ರಪ್ರದೇಶ ಕೃಷಿ ಸಹಕಾರಿ ಇಲಾಖೆ ಸಚಿವರಾದ ಕಾಕನಿ ಗೋವರ್ಧನ ರೆಡ್ಡಿ ಮೂವತ್ತು ವರ್ಷದ ನಂತರ ಕನ್ನಡದಲ್ಲಿ ರೋಮಾಂಚನವಾಗುತ್ತಿದೆ ಎಂದರು.

Jawaharlal Nehru National College Of Engineering
30 ವರ್ಷಗಳ ನಂತರ ಕನ್ನಡ ಮಾತನಾಡುವಾಗ ರೋಮಾಂಚನವಾಗುತ್ತಿದೆ

By

Published : May 22, 2022, 5:09 PM IST

ಶಿವಮೊಗ್ಗ:ಮೂವತ್ತು ವರ್ಷಗಳ ನಂತರ ಮತ್ತೊಮ್ಮೆ ಕನ್ನಡದಲ್ಲಿ ಮಾತನಾಡುವಾಗ ಒಂದು ರೀತಿಯ ರೋಮಾಂಚನವಾಗುತ್ತಿದೆ. ಕನ್ನಡದ ಹಳೆಯ ಹಾಡುಗಳು ಮನಸ್ಸಿನಲ್ಲಿ ಸದಾ ಗುನುಗುತ್ತಿದ್ದೆ. ವಿದ್ಯಾಭ್ಯಾಸದ ಸಂದರ್ಭದಲ್ಲಿ ಇಲ್ಲಿ ಕಳೆದ ಅನೇಕ ಕ್ಷಣಗಳು ಅವಿಸ್ಮರಣೀಯ ಎಂದು ಆಂಧ್ರಪ್ರದೇಶ ಕೃಷಿ ಸಹಕಾರಿ ಇಲಾಖೆ ಸಚಿವರಾದ ಕಾಕನಿ ಗೋವರ್ಧನ ರೆಡ್ಡಿ ಹೇಳಿದರು.

ನಗರದ ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಏರ್ಪಡಿಸಿದ್ದ ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ-ನೆನಪಿನ ಅಂಗಳ 2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಓರ್ವ ವ್ಯಕ್ತಿಯ ಉನ್ನತೀಕರಣದಲ್ಲಿ ಶಿಕ್ಷಕರ ಹಾಗೂ ವಿದ್ಯಾ ಸಂಸ್ಥೆಯ ಪಾತ್ರ ಪ್ರಮುಖವಾಗಿದೆ. ಅಂತಹ ಅದ್ಭುತ ಸ್ಪಂದನೆ ನನಗೆ ಕಲಿಸಿದ ಶಿಕ್ಷಕರಿಂದ, ವಿದ್ಯಾಸಂಸ್ಥೆಗಳಿಂದ ದೊರೆತ್ತಿದ್ದರಿಂದಲೇ ಯಶಸ್ಸಿನ ಹಾದಿಯೆಡೆಗೆ ಸಾಗಲು ನನಗೆ ಸಾಧ್ಯವಾಯಿತು ಎಂದರು.

ಇತರರ ಕೈಕೆಳಗೆ ಕೆಲಸ ಮಾಡಲು ಇಚ್ಛೆಯಾಗದೇ ಸಿವಿಲ್ ಕನ್ಸಲ್ಟೆಂಟ್ ಆಗಿ ಸ್ವಂತ ಉದ್ಯಮ ಪ್ರಾರಂಭಿಸಿದೆ. ಅನೇಕ ಸವಾಲುಗಳ ನಂತರ ಉತ್ತಮ ಉದ್ಯಮಿಯಾಗಿ ಹೊರಹೊಮ್ಮಿದೆ. ನಂತರ ರಾಜಶೇಖರ ರೆಡ್ಡಿ ಅವರ ನಾಯಕತ್ವದಲ್ಲಿ ಜಿಲ್ಲಾ ಪರಿಷತ್ತಿನ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದೆ.

ಪ್ರಸ್ತುತ ಜಗನ್ ಮೋಹನ್ ರೆಡ್ಡಿ ಅವರ ಸಂಪುಟದ ಅತಿ ಸೂಕ್ಷ್ಮ ಇಲಾಖೆಯಾದ ಕೃಷಿ ಮತ್ತು ಸಹಕಾರ ಇಲಾಖೆಯ ಸಚಿವನಾಗಿ ಸೇವೆ ಸಲ್ಲಿಸಲು ಸಾಧ್ಯವಾಯಿತು. ಕೃಷಿಯಾಧಾರಿತ ಅರ್ಹ ಫಲಾನುಭವಿಗಳಿಗೆ ನೇರವಾಗಿ ಹಣ ಸಂದಾಯವಾಗುವ ವ್ಯವಸ್ಥೆಯನ್ನು ಆಂಧ್ರಪ್ರದೇಶ ಸರ್ಕಾರ ಅನುಷ್ಟಾನಗೊಳಿಸಿದೆ ಎಂದರು.

ಇದೇ ವೇಳೆ ಕಾಲೇಜಿನ ಆವರಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಒಂದು ಸಾವಿರ ಜನ ಆಸನ ಸಾಮರ್ಥ್ಯವಿರುವ ಹಳೆಯ ವಿದ್ಯಾರ್ಥಿಗಳ ಸಭಾಂಗಣಕ್ಕೆ ವೈಯುಕ್ತಿಕವಾಗಿ ಐದು ಲಕ್ಷ ರೂಪಾಯಿಗಳ ಸಹಾಯಧನ ಘೋಷಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಏಳು ಜನ ಹಳೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಡಿ.ಎಸ್. ಅರುಣ್, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್, ಉಪಾಧ್ಯಕ್ಷ ಸಿ.ಆರ್. ನಾಗರಾಜ, ಕಾರ್ಯದರ್ಶಿ ಎಸ್.ಎನ್. ನಾಗರಾಜ್, ಸಹ ಕಾರ್ಯದರ್ಶಿ ಡಾ.ಪಿ..ನಾರಾಯಣ್, ಖಜಾಂಚಿ ಡಿ.ಜಿ. ರಮೇಶ್, ನಿರ್ದೇಶಕರಾದ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಸುಧೀರ್, ಕುಲಸಚಿವ ಪ್ರೊ.ಹೂವಯ್ಯಗೌಡ, ಪ್ರಾಂಶುಪಾಲ ಡಾ.ಕೆ. ನಾಗೇಂದ್ರಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಸುರೇಂದ್ರ, ಉಪಾಧ್ಯಕ್ಷ ರಾಜೇಂದ್ರ ಪ್ರಸಾದ್, ಕಾರ್ಯದರ್ಶಿ ಡಾ.ಕೆ.ಎಂ.ಬಸಪ್ಪಾಜಿ ಉಪಸ್ಥಿತರಿದ್ದರು.

ಇದನ್ನೂ ಓದಿ:Qutub Minar complex​ survey: ವಿಗ್ರಹಗಳ ಉತ್ಖನನ, ಪ್ರತಿಮಾಶಾಸ್ತ್ರ ನಡೆಸಲು ಸರ್ಕಾರದ ಆದೇಶ

ABOUT THE AUTHOR

...view details