ಶಿವಮೊಗ್ಗ :ಜಿಲ್ಲೆಯ ಇಬ್ಬರು ಶಾಸಕರಿಗೆ ಕೊರೊನಾ ಸೋಂಕು ತಗುಲಿದೆ. ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಇಂದು ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ವಿಧಾನಪರಿಷತ್ ಸದಸ್ಯ ರುದ್ರೇಗೌಡರಿಗೆ ಕೊರೊನಾ ಪಾಸಿಟಿವ್ ಬಂದಿದ್ದರೂ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಆದರೂ ವೈದ್ಯರ ಸಲಹೆಯಂತೆ ಹೋಂ ಐಸೋಲೇಷನ್ ಆಗಿದ್ದಾರೆ.
ಇನ್ನು ಭದ್ರಾವತಿಯ ಶಾಸಕ ಬಿ.ಕೆ.ಸಂಗಮೇಶ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಬಳಿಕ ಕೊರೊನಾ ಪರೀಕ್ಷಗೆ ಒಳಗಾಗಿದ್ದು, ಅವರಿಗೂ ಪಾಸಿಟಿವ್ ಬಂದಿದೆ. ಇದರಿಂದ ಶಾಸಕರು ಮನೆಯಲ್ಲಿಯೇ ಪ್ರತ್ಯೇಕವಾಗಿ ಕ್ವಾರಂಟೈನ್ ಆಗಿದ್ದಾರೆ.
ಅದಲ್ಲದೇ ಶಾಸಕರ ಮಗ ಗಣೇಶ ಅವರಿಗೂ ಸಹ ಸೋಂಕು ತಗುಲಿರುವುದು ದೃಢಪಟ್ಟಿದೆ. ಯಾರಿಗೂ ಸಹ ರೋಗದ ಯಾವುದೇ ಲಕ್ಷಣಗಳಿಲ್ಲ ಎಂದು ವೈದ್ಯರು ದೃಢೀಕರಿಸಿದ್ದಾರೆ.
ಇದನ್ನೂ ಓದಿ:ಕೊಟ್ಟ ಸಾಲ ಕೇಳಿದ್ದಕ್ಕೆ ಅಪಪ್ರಚಾರ: ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ