ಶಿವಮೊಗ್ಗ: ಕೆಲವರಿಗೆ ಸ್ವಲ್ಪ ಹುಚ್ಚು ಇರುತ್ತದೆ. ಇನ್ನೂ ಕೆಲವರಿಗೆ ಅರ್ಧ ಹುಚ್ಚು ಇರುತ್ತದೆ. ಆದರೆ ಸಿದ್ದರಾಮಯ್ಯಗೆ ಸಂಪೂರ್ಣ ಹುಚ್ಚು ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಆರ್‌ಎಸ್‌ಎಸ್‌ನವರದ್ದು ತಾಲಿಬಾನ್ ಸಂಸ್ಕೃತಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನ ಹುಚ್ಚು ಯಾವಾಗ ಕಡಿಮೆಯಾಗುತ್ತದೆಯೋ ಆವಾಗ ಅವರ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ಸಿಎಂ ಸ್ಥಾನ ಕಳೆದುಕೊಂಡ ಬಳಿಕ ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ. ಡಿ.ಕೆ ಶಿವಕುಮಾರ್ ಅಧ್ಯಕ್ಷರಾದ ಮೇಲೆ ಅವರಿಬ್ಬರ ನಡುವೆ ಯುದ್ದ ನಡೆಯುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ಏನು ಮಾಡಬೇಕು ಎಂದು ತೋಚುತ್ತಿಲ್ಲ ಎಂದರು.
ಮೊದಲು ಹಿಂದುಳಿದವರ ಪರ ಕೆಲಸ ಮಾಡುತ್ತೇನೆ ಎಂದು ಘೊಷಣೆ ಮಾಡುತ್ತಿದ್ದರು. ಜಾತಿ ಗಣತಿ ತರುತ್ತೇನೆ ಎಂದು 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇನೆ ಎಂದಿದ್ದರು. ಆದರೆ, ಸಿದ್ದರಾಮಯ್ಯ ಕಾಂತರಾಜ್ ವರದಿ ಏಕೆ ಬಿಡುಗಡೆ ಮಾಡಲಿಲ್ಲ. ವರದಿ ಬಿಡುಗಡೆಗೆ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಒಪ್ಪಲಿಲ್ಲ ಎನ್ನುತ್ತಾರೆ. ಹಾಗಿದ್ದರೆ ಜೆಡಿಎಸ್‌ಗೆ ನೀಡಿದ ಬೆಂಬಲ ವಾಪಸ್ ತೆಗೆದುಕೊಳ್ಳಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಾಬಾ ಬುಡನ್ ಗಿರಿ ಕುರಿತ ತೀರ್ಪು ಸ್ವಾಗತ: