ಶಿವಮೊಗ್ಗ:ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ನಿಷ್ಕ್ರಿಯ ಮಂತ್ರಿ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಮತ್ತು ಬಾಲಿಶವಾಗಿದ್ದು, ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಆಗ್ರಹಿಸಿದ್ದಾರೆ.
ಮಾಜಿ ಶಾಸಕ ಪ್ರಸನ್ನಕುಮಾರ್ ತಮ್ಮ ಹೇಳಿಕೆ ಹಿಂಪಡೆಯಲಿ; ಎಸ್. ದತ್ತಾತ್ರಿ ಆಗ್ರಹ - shimoga news
ಕೆ.ಎಸ್. ಈಶ್ವರಪ್ಪ ಐದು ಬಾರಿ ಶಾಸಕರಾಗಿ, ಮೂರು ಬಾರಿ ಸಚಿವರಾಗಿ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇಂಥವರಿಗೆ ನಿಷ್ಕ್ರಿಯ ಸಚಿವ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಶ್ವರಪ್ಪ ಅವರು ಐದು ಬಾರಿ ಶಾಸಕರಾಗಿ, ಮೂರು ಬಾರಿ ಸಚಿವರಾಗಿ ಹಾಗೂ ಉಪಮುಖ್ಯಮಂತ್ರಿಗಳಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇಂಥವರಿಗೆ ನಿಷ್ಕ್ರಿಯ ಸಚಿವ ಎಂದ ಮಾಜಿ ಶಾಸಕರ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ಕೆ.ಬಿ. ಪ್ರಸನ್ನ ಕುಮಾರ್ ಅವರು ಶಾಸಕರಾಗಿದ್ದಾಗ ಯಾವುದೇ ಕೆಲಸ ಮಾಡಿಲ್ಲ. ಈಗ ತಮ್ಮ ಇರುವಿಕೆಯನ್ನು ಗುರುತಿಸಿಕೊಳ್ಳಲು ಇಂತಹ ಟೀಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈಶ್ವರಪ್ಪ ಸಚಿವರಾಗಿ ಕೊರೊನಾ ಸಂದರ್ಭದಲ್ಲಿ ರಾಜ್ಯ ಸುತ್ತಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕೆ.ಬಿ. ಪ್ರಸನ್ನ ಕುಮಾರ್ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಅಧಿಕಾರಿಗಳ ಪಟ್ಟಿ ಮಾಡಿಕೊಂಡು ವರ್ಗಾವಣೆ ಮಾಡಿದ್ದಾರೆ ಹೊರತು, ಯಾವುದೇ ಅಭಿವೃದ್ಧಿ ಮಾಡಿಲ್ಲ. ಈಶ್ವರಪ್ಪನವರು ಯಾವುದೇ ಅಧಿಕಾರಿಯನ್ನು ವರ್ಗಾವಣೆ ಮಾಡಿಸಿಲ್ಲ ಮುಂದೆಯು ಅಧಿಕಾರಿಗಳ ವರ್ಗಾವಣೆ ಮಾಡಿಸುವುದಿಲ್ಲ. ಅವರು ಕೊರೊನಾ ಸಂದರ್ಭದಲ್ಲಿಯೂ ಸಹ ಅನೇಕ ಯೋಜನೆಗಳಿಗೆ ಅನುದಾನ ತಂದು ಗುದ್ದಲಿ ಪೂಜೆ ಮಾಡಿದ್ದಾರೆ. ಅವರು ಯಾವುದೇ ಅನುದಾನ ತರದೇ ಪ್ರಚಾರಕ್ಕಾಗಿ ಗುದ್ದಲಿ ಪೂಜೆ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.