ಕರ್ನಾಟಕ

karnataka

ETV Bharat / city

ನ್ಯೂ ಮಂಡ್ಲಿ ಸರ್ಕಾರಿ ಶಾಲೆ ಕಟ್ಟಡ ದುರಸ್ತಿಗಾಗಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - ನ್ಯೂ ಮಂಡ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಶಿವಮೊಗ್ಗದ ನ್ಯೂ ಮಂಡ್ಲಿ ಸರ್ಕಾರಿ ಶಾಲೆ ಕಟ್ಟಡ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

Students protest for repair of school building
ನ್ಯೂ ಮಂಡ್ಲಿ ಸರ್ಕಾರಿ ಶಾಲೆ ಕಟ್ಟಡ ದುರಸ್ತಿಗಾಗಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

By

Published : May 18, 2022, 10:35 AM IST

ಶಿವಮೊಗ್ಗ:ನ್ಯೂ ಮಂಡ್ಲಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದುರಸ್ತಿಪಡಿಸಬೇಕು ಎಂದು ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ನ್ಯೂ ಮಂಡ್ಲಿ ನಾಗರಿಕರ ಹಿತರಕ್ಷಣ ಸಮಿತಿ ಶಾಲಾ ಮಕ್ಕಳೊಂದಿಗೆ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಾಲೆಯ ಕಟ್ಟಡ ಕುಸಿದು ಹೋಗಿದೆ. ಮಳೆ ಬಂದು ನೀರು ನಿಂತಿದ್ದು, ಮಕ್ಕಳು ಅಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ. ಶೀಘ್ರವೇ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿದರು.


ಇನ್ನೇನು ಮಳೆಗಾಲ ಆರಂಭವಾಗುತ್ತಿದೆ. ಹೀಗಾದರೆ ಗತಿಯೇನು?. ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಜಿಲ್ಲಾಡಳಿತ ಕೂಡ ಸುಮ್ಮನಿದೆ. ಈ ಹಿಂದೆ ಮಳೆಯಿಂದಾಗಿ ಶಾಲೆಯ ಆವರಣದಲ್ಲಿ ನೀರು ತುಂಬಿಕೊಂಡಿತ್ತು. ಆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದಾಗ ಬಿಇಒ, ಡಿಡಿಪಿಐ ಆಗಮಿಸಿ ಕೂಡಲೇ ಹೊಸ ಕಟ್ಟಡ ನಿರ್ಮಿಸಿ ಕೊಡುವ ಭರವಸೆ ನೀಡಿದ್ದರು. ಈವರೆಗೆ ಶಾಲೆಯ ದುರಸ್ತಿ ಬಗ್ಗೆ ಕ್ರಮ ಕೈಗೊಂಡಿಲ್ಲ. ಇದೀಗ ಮತ್ತೆ ಬಿದ್ದ ಮಳೆಗೆ ಶಾಲಾ ಕಟ್ಟಡ ಕುಸಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಶಾಲೆ ನಡೆಯುತ್ತಿದ್ದು, ಬಾಡಿಗೆಯನ್ನು ಸಹ ಕೊಟ್ಟಿಲ್ಲ. ಇದೀಗ ಕಟ್ಟಡದ ಮಾಲೀಕರು ಬಾಡಿಗೆಗೆ ಒತ್ತಾಯಿಸುತ್ತಿದ್ದಾರೆ. ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 163 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೂಡಲೇ ಶಾಲಾ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಬೇಕು. ಅಲ್ಲಿಯವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಈಟಿವಿ ಭಾರತ ಫಲಶ್ರುತಿ: ಶಾಲಾ ಕಟ್ಟಡ ದುರಸ್ತಿಗೆ ಜಿಲ್ಲಾಡಳಿತದಿಂದ ₹ 20 ಲಕ್ಷ ಬಿಡುಗಡೆ

ABOUT THE AUTHOR

...view details