ಶಿವಮೊಗ್ಗ :ಚಲಿಸುತ್ತಿದ್ದ ಬೈಕ್ ಮೇಲೆ ಬೃಹದಾಕಾರದ ಮರ ಬಿದ್ದ ಪರಿಣಾಮ ಸವಾರ ಸೇರಿ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.
ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೂವರಿಗೆ ಗಾಯ ಸಾಧಿಕ್ ಎಂಬಾತ ಬೈಕ್ನಲ್ಲಿ ತೆರಳುತ್ತಿದ್ದಾಗ ಹೊಸನಗರದ ರಾಷ್ಟ್ರೀಯ ಹೆದ್ದಾರಿ 766ಸಿ ಕೊಡಚಾದ್ರಿ ಕಾಲೇಜಿನ ಮುಂಭಾಗ ಮರದ ಕೊಂಬೆ ಮುರಿದು ಆತನ ಮೈಮೇಲೆಯೇ ಬಿದ್ದಿದೆ.
ಇದರಿಂದ ಸಾಧಿಕ್ ತಲೆ ಹಾಗೂ ಕೈಗಳಿಗೆ ತೀವ್ರ ಪೆಟ್ಟು ಬಿದ್ದಿದ್ದು, ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ವೇಳೆ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹೃತಿಕ್ ಮತ್ತು ಪ್ರತೀಕ್ ಎಂಬುವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಕೂಡಲೇ ಸ್ಥಳಕ್ಕಾಗಮಿಸಿದ ಹೊಸನಗರ ಪೊಲೀಸರು, ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಓದಿ:ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಮೋದಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು: ದಿನೇಶ್ ಗುಂಡೂರಾವ್