ಶಿವಮೊಗ್ಗ: ಜಿಲ್ಲೆಯ ಸೊರಬ ಪಟ್ಟಣ ಪಂಚಾಯತಿ ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಾರಂಭವಾಗಿದೆ.
ಸೊರಬ ಪಟ್ಟಣ ಪಂಚಾಯತಿ ಚುನಾವಣೆ...ಮತದಾನಕ್ಕೆ ನೀರಸ ಪ್ರತಿಕ್ರಿಯೆ - undefined
ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದ್ದು, ಮತದನಾ ಮಂದಗತಿಯಲ್ಲಿ ಸಾಗಿದೆ.
ಸೊರಬ ಪಟ್ಟಣ ಪಂಚಾಯಿತಿಯ 12 ವಾರ್ಡ್ಗಳಿಗೆ ಚುನಾವಣೆ ನಡೆಯುತ್ತಿದೆ. ಬಿಜೆಪಿ ಪಕ್ಷವು 12 ವಾರ್ಡ್ಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆಗೆ ಇಳಿದಿವೆ. ಕಾಂಗ್ರೆಸ್ 05 ವಾರ್ಡ್ನಲ್ಲಿ ಸ್ಪರ್ಧೆ ಮಾಡುತ್ತಿದ್ದರೆ, ಜೆಡಿಎಸ್ 07 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. 10 ಜನ ಪಕ್ಷೇತರ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇದ್ದಾರೆ. ಸೊರಬ ಪಟ್ಟಣ ಪಂಚಾಯತಿಯಲ್ಲಿ ಒಟ್ಟು 9,350 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಗೆ ಅತ್ಯಂತ ಬಿರುಸಿನಿಂದ ಮತದಾನವಾಗಬೇಕಿತ್ತು. ಆದ್ರೆ, ಸದ್ಯದ ಮಟ್ಟಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಧ್ಯಾಹ್ನದ ನಂತ್ರ ಮತದಾನ ಚುರುಕಾಗುವ ಸಾಧ್ಯತೆಗಳಿವೆ. ಇನ್ನು ಸೊರಬ ಪಟ್ಟಣ ಪಂಚಾಯಿತಿಯಲ್ಲಿ ಕಳೆದ ಬಾರಿ ಜೆಡಿಎಸ್ ಅಧಿಕಾರ ಪಡೆದಿತ್ತು. ಈ ಬಾರಿ ಮೈತ್ರಿ ಮತ್ತೆ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿದ್ದರೆ, ಬಿಜೆಪಿ ಸಹ ಈ ಬಾರಿ ಸೊರಬ ಪಟ್ಟಣ ಪಂಚಾಯತಿಯ ಮೇಲೆ ತಮ್ಮ ಬಾವುಟ ಹಾರಿಸುವ ತವಕದಲ್ಲಿದೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಕಂಡಿದ್ದು, ಈ ಬಾರಿ ಪಟ್ಟಣ ಪಂಚಾಯತಿಯನ್ನು ಸಹ ತನ್ನ ತೆಕ್ಕಗೆ ತೆಗೆದು ಕೊಳ್ಳುವ ವಿಶ್ವಾಸದಲ್ಲಿದೆ. ಎಲ್ಲಾ ಕಡೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.