ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೇಲಿಮಹನಸವಾಡಿ ಗ್ರಾಮದ ಬಳಿ ನಡೆದಿದೆ.
ಓವರ್ ಟೇಕ್ ಭರದಲ್ಲಿ ಬೈಕ್- ಬಸ್ ಮಧ್ಯೆ ಡಿಕ್ಕಿ: ಯುವಕ - ಯುವತಿ ದುರ್ಮರಣ - ಮೇಲಿಮಹನಸವಾಡಿ ಬೈಕ್ಗೆ ಬಸ್ ಡಿಕ್ಕಿ ಪ್ರಕರಣ
ಶಿವಮೊಗ್ಗದಿಂದ ಹೊನ್ನಾಳಿ ಕಡೆ ಹೊರಟಿದ್ದ ಬಸ್, ಹೊನ್ನಾಳಿ ಕಡೆಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಕಾರನ್ನು ಓವರ್ ಟೇಕ್ ಮಾಡಲು ಹೋದಾಗ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಬೈಕ್ ಬಸ್ ಡಿಕ್ಕಿ
ಓವರ್ ಟೆಕ್ ಮಾಡಲು ಹೋಗಿ ಬಸ್ಗೆ ಡಿಕ್ಕಿ ಹೊಡೆದ ಬೈಕ್
ಶಿವಮೊಗ್ಗದಿಂದ ಹೊನ್ನಾಳಿ ಕಡೆ ಹೊರಟಿದ್ದ ಬಸ್ ಹೊನ್ನಾಳಿ ಕಡೆಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಕಾರನ್ನು ಓವರ್ ಟೇಕ್ ಮಾಡಲು ಹೋದಾಗ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಹೊನ್ನಾಳಿ ತಾಲೂಕಿನ ಬಾಗೆವಾಡಿ ಗ್ರಾಮದ ರಘು(21) ಹಾಗೂ ಸುಮ(20) ಮೃತರು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ದೇಹಗಳೆರಡು ಛಿದ್ರವಾಗಿವೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.