ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಶಿವಮೊಗ್ಗದಲ್ಲಿ ಇಂದು ಇಬ್ಬರಿಗೆ ಪಾಸಿಟಿವ್ ಪತ್ತೆ: ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆ - ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
P-2087, 31 ವರ್ಷದ ಪುರುಷನಿಗೆ P- 808 ಗುಜರಾತ್ನಿಂದ ಬಂದವರ ಸಂಪರ್ಕದಿಂದ ಪಾಸಿಟಿವ್ ಬಂದಿದೆ. ಇನ್ನೊಂದು ಪ್ರಕರಣದಲ್ಲಿ P-2088, 74 ವರ್ಷದ ವ್ಯಕ್ತಿ ರಾಜಸ್ಥಾನದಿಂದ ವಾಪಸ್ ಆಗಿದ್ದಾರೆ. ಇಬ್ಬರನ್ನು ಕೋವಿಡ್ ಆಸ್ಪತ್ರೆಗೆ ದಾಖಲುಮಾಡಲಾಗಿದೆ. ಇದರಿಂದ ಜಿಲ್ಲೆಯ ಕೊರೊನಾಸೊಂಕಿತರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.
ಇನ್ನೂ ತುಂಗಾನಗರದ ಕಂಟೇನ್ಮೆಂಟ್ ಝೋನ್ನಲ್ಲಿ ಸಾರ್ವಜನಿಕರ ಪ್ರವೇಶ ಹಾಗೂ ಮುಕ್ತ ಸಂಚಾರವನ್ನು ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಆದೇಶ ಹೊರಡಿಸಿದ್ದಾರೆ. ಕಂಟೇನ್ಮೆಂಟ್ನಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದರೆ, 8123536141 ಹಾಗೂ ಪಾಲಿಕೆ ಸಹಾಯವಾಣಿ 18004257677 ಕರೆ ಮಾಡುವಂತೆ ತಿಳಿಸಲಾಗಿದೆ.