ಶಿವಮೊಗ್ಗ:ಬೆಳ್ಳಂಬೆಳಗ್ಗೆ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ನಡೆದಿದೆ.
ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರಿಗೆ ಶಿವಮೊಗ್ಗ ಕಡೆಯಿಂದ ಹೋಗುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಎದುರಿನ ರಸ್ತೆಗೆ ಚಲಿಸಿದೆ. ಈ ವೇಳೆ ಎದುರಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಭದ್ರಾವತಿ ಪೇಪರ್ ಟೌನ್ ನಿವಾಸಿಗಳಾದ ಷಣ್ಮುಗ(39) ಹಾಗೂ ರಾಮಚಂದ್ರ(40) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.