ಶಿವಮೊಗ್ಗ: ಡಾ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಬೇಕೆಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಒತ್ತಾಯಿಸಿದರು.
ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯ - ಡಾ. ಸರೋಜಿನಿ ಮಹಿಷಿ ವರದಿ
ಮೂರು ದಶಕಗಳಿಂದ ಡಾ.ಸರೋಜಿನಿ ಮಹಿಷಿ ವರದಿಯನ್ನ ಜಾರಿಗೆ ತನ್ನಿ ಎಂದು ಕನ್ನಡ ಸಾಹಿತಿಗಳು ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಾ ಬಂದರೂ ಯಾವುದೇ ಸರ್ಕಾರಗಳು ಈ ಬಗ್ಗೆ ಗಮನ ನೀಡುತ್ತಿಲ್ಲ ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ದೂರಿದರು.
![ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯ](https://etvbharatimages.akamaized.net/etvbharat/prod-images/768-512-4284146-thumbnail-3x2-megha.jpg)
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೂರು ದಶಕಗಳಿಂದ ಡಾ.ಸರೋಜಿನಿ ಮಹಿಷಿ ವರದಿಯನ್ನ ಜಾರಿಗೆ ತನ್ನಿ ಎಂದು ಸಾಹಿತಿಗಳು, ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಾ ಬಂದರೂ ಯಾವುದೇ ಸರ್ಕಾರಗಳು ಈ ಬಗ್ಗೆ ಗಮನ ನೀಡುತ್ತಿಲ್ಲ ಎಂದು ದೂರಿದರು.
ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲೂ ಸಹ ವರದಿಯನ್ನು ಅನುಷ್ಠಾನಕ್ಕೆ ತನ್ನಿ ಎಂದು ತಿಳಿಸಿದ್ದೆವು.ಆದರೆ ಆಗಿರಲಿಲ್ಲ. ಬಳಿಕ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಿ ಮತ್ತು ಡಿ ದರ್ಜೆಯ ನೌಕರಿಯಲ್ಲಿ ಶೇಕಡಾ 100% ರಷ್ಟು ಆದ್ಯತೆ ನೀಡಬೇಕೆಂದು ಅಧಿಸೂಚನೆ ಹೊರಡಿಸಿದ್ದರು. ಈಗ ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ವತಂತ್ರ ದಿನಾಚರಣೆಯ ದಿನದಂದು ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಎಂದು ಹೇಳಿದ್ದಾರೆ. ಅದು ಕೇವಲ ಹೇಳಿಕೆ ಆಗದೇ ಆದಷ್ಟು ಬೇಗ ಅದನ್ನ ಕಾಯ್ದೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.