ಕರ್ನಾಟಕ

karnataka

ETV Bharat / city

ಸೋಂಕಿತರಿಗೆ ಚಿಕಿತ್ಸೆ ನೀಡಲು ಮೆಗ್ಗಾನ್​ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯರ ಬಳಕೆ: ಸಚಿವ ಕೆ.ಎಸ್.ಈಶ್ವರಪ್ಪ - ಶಿವಮೊಗ್ಗ ಸುದ್ದಿ

ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಸ್ತುತ ಇರುವ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ವೈದ್ಯರ ಸೇವೆಯನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

Use of private doctors at Meggan Hospital to treat the Corona infected: Minister KS Eshwarappa
ಸೋಂಕಿತರಿಗೆ ಚಿಕಿತ್ಸೆ ನೀಡಲು ಮೆಗ್ಗಾನ್​ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯರ ಬಳಕೆ: ಸಚಿವ ಕೆ.ಎಸ್.ಈಶ್ವರಪ್ಪ

By

Published : Sep 17, 2020, 10:00 PM IST

ಶಿವಮೊಗ್ಗ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೆಗ್ಗಾನ್ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯರ ಸೇವೆಯನ್ನು ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸೋಂಕಿತರಿಗೆ ಚಿಕಿತ್ಸೆ ನೀಡಲು ಮೆಗ್ಗಾನ್​ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯರ ಬಳಕೆ: ಸಚಿವ ಕೆ.ಎಸ್.ಈಶ್ವರಪ್ಪ
ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಲ್ಪಿಸಲಾಗಿರುವ ಹೊಸ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿ, ಬಳಿ ವೈದ್ಯಾಧಿಕಾರಿಗಳ ಸಭೆ ನಡೆಸಿದರು. ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೆಗ್ಗಾನ್ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮೆಗ್ಗಾನ್‍ನಲ್ಲಿ 390 ಆಕ್ಸಿಜನ್ ಬೆಡ್‍ಗಳು ಲಭ್ಯವಿದ್ದು, ಪ್ರಸ್ತುತ ಇರುವ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ವೈದ್ಯರ ಸೇವೆಯನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಅಗತ್ಯಬಿದ್ದರೆ ಮುಂದಿನ ದಿನಗಳಲ್ಲಿ ಖಾಸಗಿ ನರ್ಸಿಂಗ್ ಹೋಂಗಳನ್ನು ಸಹ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಲ್ಕು ಖಾಸಗಿ ವೈದ್ಯರ ಸೇವೆಯನ್ನು ಕಳೆದ ಒಂದು ವಾರದಿಂದ ಬಳಸಿಕೊಳ್ಳಲಾಗುತ್ತಿದೆ. ಆದರೆ, ಕೆಲವು ವೈದ್ಯರು ಸೇವೆಯನ್ನು ನೀಡಲು ಹಿಂದೇಟು ಹಾಕುತ್ತಿದ್ದು, ಅಂತಹ ವೈದ್ಯರ ವಿರುದ್ಧ ಕಾನೂನುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ ಲಭ್ಯತೆ: ಪ್ರಸ್ತುತ ಶಿಕಾರಿಪುರ, ಸಾಗರ ಹಾಗೂ ಭಧ್ರಾವತಿ ತಾಲೂಕು ಆಸ್ಪತ್ರೆಗಳಲ್ಲಿ ತಲಾ 50 ಆಕ್ಸಿಜನ್ ಬೆಡ್‍ಗಳು ಲಭ್ಯವಿದೆ. ಆಯಾ ತಾಲೂಕುಗಳ ಕೊರೊನಾ ಸೋಂಕಿತರಿಗೆ ಅಲ್ಲಿಯೇ ಚಿಕಿತ್ಸೆ ಒದಗಿಸಬೇಕು. ಅಗತ್ಯ ಬಿದ್ದರೆ ಮಾತ್ರ ಮೆಗ್ಗಾನ್ ಆಸ್ಪತ್ರೆಗೆ ಶಿಫಾರಸು ಮಾಡಬೇಕು ಎಂದು ಡಿಸಿ ತಿಳಿಸಿದರು.

ಐಎಂಎ ಅಧ್ಯಕ್ಷ ಡಾ.ಪರಶುರಾಮ ಅವರು ಮಾತನಾಡಿ, ಖಾಸಗಿ ವೈದ್ಯರು ಮೆಗ್ಗಾನ್‍ನಲ್ಲಿ ಸೇವೆ ಸಲ್ಲಿಸಲು ಸಿದ್ದರಿದ್ದಾರೆ. ಅವರಿಗೆ ಕೆಲವು ಸೌಲಭ್ಯಗಳನ್ನು ಒದಗಿಸಿ ಕೊಡಬೇಕು. ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆ ಪ್ರೊಟೊಕಾಲ್ ಬಗ್ಗೆ ತರಬೇತಿ ನೀಡಬೇಕು. ಅವರಿಗೆ ಒಂದು ವಾರ ಸೇವೆ ಸಲ್ಲಿಸಿದ ಬಳಿಕ ಕ್ವಾರೆಂಟೈನ್ ವ್ಯವಸ್ಥೆ ಮಾಡಬೇಕು. ಸರ್ಕಾರಿ ವೈದ್ಯರಿಗೆ ಅನ್ವಯವಾಗುವ ವಿಮಾ ಸೌಲಭ್ಯವನ್ನು ಅವರಿಗೂ ಕಲ್ಪಿಸಬೇಕು ಎಂದರು.

ABOUT THE AUTHOR

...view details