ಶಿವಮೊಗ್ಗ: ರಾಮಶೆಟ್ಟಿ ಪಾರ್ಕ್ನ ಗಣಪತಿ ದೇವಸ್ಥಾನದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಬಿಜೆಪಿಯ ಹಿರಿಯ ಮುಖಂಡ ವಿ. ಸೋಮಣ್ಣ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.
ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ವಿ. ಸೋಮಣ್ಣ - Shivmogga floods areas
ಶಿವಮೊಗ್ಗದ ರಾಮಶೆಟ್ಟಿ ಪಾರ್ಕ್ನ ಗಣಪತಿ ದೇವಸ್ಥಾನದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಬಿಜೆಪಿಯ ಹಿರಿಯ ಮುಖಂಡ ವಿ. ಸೋಮಣ್ಣ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಪರಿಸ್ಥಿತಿಯನ್ನು ಅವಲೋಕಿಸಿದ್ದೇವೆ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡುವ ಕುರಿತಾಗಿ ಚರ್ಚಿಸುತ್ತಿದ್ದೇವೆ. ಈಗಾಗಲೇ ರಾಜ್ಯ ಸರ್ಕಾರ 100 ಕೋಟಿ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ 128 ಕೋಟಿ ಬಿಡುಗಡೆ ಮಾಡಿದೆ ಎಂದರು.
ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ನಾಳೆ ಕೇಂದ್ರದಿಂದ ಅಮಿತ್ ಶಾ ಅವರು ಬರಲಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವೈಮಾನಿಕ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಕೇಂದ್ರದ ನಾಯಕರ ಬಳಿ ವಿಪತ್ತಿನ ಕುರಿತು ಮನವರಿಕೆ ಮಾಡಿ ಕೊಡುತ್ತೇವೆ ಎಂದರು. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿರುವುದರಿಂದ ಜನರು ಭಯ ಪಡುವ ಅಗತ್ಯ ಇಲ್ಲ ಎಂದರು.