ಶಿವಮೊಗ್ಗ:ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕಾದ ಕಾರ್ಮಿಕ ಇಲಾಖೆಯೇ ನಿಷ್ಕ್ರಿಯವಾಗಿದೆ. ಇಲ್ಲಿವರೆಗೂ ಈ ಇಲಾಖೆಯನ್ನು ಸದೃಢವಾಗಿ ಮಾಡುವ ಕೆಲಸವನ್ನು ಯಾವ ಸರ್ಕಾರಗಳು ಮಾಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾರ್ಮಿಕ ಇಲಾಖೆಯನ್ನು ಯಾವ ಸರ್ಕಾರಗಳು ಸದೃಢಗೊಳಿಸಿಲ್ಲ: ಆಯನೂರು ಮಂಜುನಾಥ್ - Shimoga news
ಮುಖ್ಯಮಂತ್ರಿಗಳ ಜಿಲ್ಲೆಯಲ್ಲೇ ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಇದರಿಂದಾಗಿ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕರ ನವೀಕರಣ ಕೂಡ ಸಮರ್ಪಕವಾಗಿ ನಡೆಯುತ್ತಿಲ್ಲ. ಸರ್ಕಾರ ಕಾರ್ಮಿಕ ಇಲಾಖೆಯನ್ನು ಸದೃಡಗೊಳಿಸುವ ಕೆಲಸ ಮಾಡಬೇಕು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಂದು ಒತ್ತಾಯಿಸಿದರು.
ನಗರದಲ್ಲಿ ಆಯೋಜಿಸಿದ್ದ ಅಸಂಘಟಿತ ಕಾರ್ಮಿಕರ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕಾದ ಕಾರ್ಮಿಕ ಇಲಾಖೆಯೇ ನಿಷ್ಕ್ರಿಯವಾಗಿದೆ. ಈ ಇಲಾಖೆಯನ್ನು ಸದೃಢವಾಗಿ ಮಾಡುವ ಕೆಲಸವನ್ನು ಯಾವ ಸರ್ಕಾರ ಹಾಗೂ ಮಂತ್ರಿಗಳೂ ಮಾಡಿಲ್ಲ. ಮುಖ್ಯಮಂತ್ರಿಗಳ ಜಿಲ್ಲೆಯಲ್ಲೇ ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಇದರಿಂದಾಗಿ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕರ ನವೀಕರಣ ಕೂಡ ಸಮರ್ಪಕವಾಗಿ ನಡೆಯುತ್ತಿಲ್ಲ. ಸರ್ಕಾರ ಕಾರ್ಮಿಕ ಇಲಾಖೆಯನ್ನು ಸದೃಢಗೊಳಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು, ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಒಳ್ಳೆಯ ಬೆಳವಣಿಗೆಯಾಗಿದೆ. ಅಸಂಘಟಿತ ಕಾರ್ಮಿಕರ ರಕ್ಷಣೆ, ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ಈ ಸಂಘ ಕೆಲಸ ಮಾಡಲಿದೆ ಎಂದರು.