ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗದಲ್ಲಿ ಮಳೆಗೆ ಮನೆ ಗೋಡೆ ಕುಸಿತ: ವೃದ್ಧ ಸಾವು - ಶಿವಮೊಗ್ಗ ಮಳೆ ಲೇಟೆಸ್ಟ್ ಸುದ್ದಿ
ಶಿವಮೊಗ್ಗದಲ್ಲಿ ಮಳೆ ಆರ್ಭಟಕ್ಕೆ ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದ ಮನೆಯೊಂದರ ಗೋಡೆ ಕುಸಿದು ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.
ವೃದ್ಧ ಸಾವು
ಲಕ್ಷ್ಮಣಪ್ಪ (67) ಮೃತಪಟ್ಟ ವೃದ್ಧ. ರಾತ್ರಿ ಇಡೀ ಧಾರಾಕಾರ ಮಳೆ ಸುರಿದಿದ್ದು, ಲಕ್ಷ್ಮಣಪ್ಪ, ಮನೆಯಲ್ಲಿ ಮಲಗಿದ್ದ ವೇಳೆ ಬೆಳಗಿನ ಜಾವ ಗೋಡೆ ಕುಸಿದು ಇವರ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಹಾಗೂ ಭದ್ರಾವತಿ ತಹಶೀಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.