ಶಿವಮೊಗ್ಗ: ಭದ್ರಾವತಿಯ ಶಾಸಕ ಹಾಗೂ ಬೆಂಬಲಿಗರ ಗೂಂಡಾಗಿರಿಯನ್ನು ಸಹಿಸಲ್ಲ ಎಂದು ಬಿಜೆಪಿಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭದ್ರಾವತಿಯಲ್ಲಿ ತಿಳಿಸಿದ್ದಾರೆ.
ಭದ್ರಾವತಿಯಲ್ಲಿ ಮಾತನಾಡಿದ ಬಿ.ವೈ ವಿಜಯೇಂದ್ರ ಭದ್ರಾವತಿಯಲ್ಲಿ ಕಬಡ್ಡಿ ಪಂದ್ಯಾದಲ್ಲಿ ಶಾಸಕ ಸಂಗಮೇಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ಬಿಜೆಪಿ ತಾಲೂಕು ಅಧ್ಯಕ್ಷ ಪ್ರಭಾಕರ್ ಅವರ ಮನೆಗೆ ಭೇಟಿ ನೀಡಿ ಈ ಕುರಿತು ಚರ್ಚಿಸಿದ ಬಿ.ವೈ.ವಿಜಯೇಂದ್ರ, ಬಿಜೆಪಿ ಕಾರ್ಯಕರ್ತರ ಹಿಂದೆ ನಾವಿದ್ದೇವೆ. ಕಾಂಗ್ರೆಸ್ ಗೂಂಡಾಗಿರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ ಎಂದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ದಿನದಿಂದ ದಿನಕ್ಕೆ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಕೆಟ್ಟ ಸಂಸ್ಕೃತಿಯಿಂದ ಕೂಡಿರುವ ಕಾಂಗ್ರೆಸ್ ನಾಯಕರ ಕಣ್ಣಿಗೆ ಒಳ್ಳೆಯದು ಯಾವುದೂ ಕಾಣುವುದಿಲ್ಲ. ಜೈ ಶ್ರೀರಾಮ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಅವರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ನವರ ಗೂಂಡಾಗಿರಿಗೆ ಇಲ್ಲಿ ಅವಕಾಶ ನೀಡುವುದಿಲ್ಲ ಎಂದರು.
ಈ ವೇಳೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಕೆ.ಶ್ರೀನಾಥ್, ಧರ್ಮಪ್ರಸಾದ್, ನಗರ ಬಿಜೆಪಿ ಅಧ್ಯಕ್ಷರಾದ ಪ್ರಭಾಕರ, ಒಳಚರಂಡಿ ನಿಗಮದ ನಿರ್ದೇಶಕರಾದ ರುದ್ರೇಶ್ ಮಂಗೋಟೆ, ಸೂಡಾ ಸದಸ್ಯರಾದ ಕದಿರೇಶ್, ರಾಮಲಿಂಗಯ್ಯ ಹಟ್ಟಿ ಚಿನ್ನದಗಣಿ ನಿರ್ದೇಶಕರಾದ ಕೂಡ್ಲಿಗೆರೆ ಹಾಲೇಶ್, ಆನಂದ, ಸೇರಿದಂತೆ ಇನ್ನಿತರ ನಾಯಕರು ಮತ್ತು ಮೋರ್ಚಾದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.