ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವಂತೆ ಸಂಸದೆ ಸುಮಲತಾ ಅಂಬರೀಶ್ ಅವರಲ್ಲಿ ಕೇಳಿಕೊಳ್ಳುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಾಹ್ಯವಾಗಿ ಬಿಜೆಪಿ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಿದೆ. ಆ ಕಾರಣಕ್ಕಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಳಿಕೊಳ್ಳುತ್ತೇವೆ ಎಂದರು.
ನೆರೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ವಿಪಕ್ಷದ ಹೇಳಿಕೆಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಗಳು ಜೇಬಿನಲ್ಲಿ ದುಡ್ಡು ಇಟ್ಟುಕೊಂಡು ಓಡಾಡುವುದಿಲ್ಲ. ಕಾನೂನಾತ್ಮಕವಾಗಿ ನೆರೆ ಪರಿಹಾರ ಕೊಡುತ್ತಾರೆ. ನಿಯಮಾನುಸಾರ ಹಾನಿಯಾದ ಪ್ರದೇಶಗಳಿಗೆ ಪರಿಹಾರ ಬಿಡುಗಡೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ನಿರುದ್ಯೋಗ ಕೂಟ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರಿಬ್ಬರಿಗೂ ಟೀಕೆ ಮಾಡುವುದೇ ಕೆಲಸ ಎಂದು ಕುಟುಕಿದರು.
ಇದನ್ನೂ ಓದಿ:ಹಾಸನ: ಪುನೀತ್ ರಾಜ್‌ಕುಮಾರ್ ಅಭಿಮಾನಿ ಆತ್ಮಹತ್ಯೆ
ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ. 25 ಸೀಟುಗಳಲ್ಲಿ ಜೆಡಿಎಸ್ ಪಕ್ಷ 7 ಕಡೆಗಳಲ್ಲಿ ಮಾತ್ರ ಸ್ಪರ್ಧಿಸಿದೆ. ಆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಯಡಿಯೂರಪ್ಪನವರು ಮನವಿ ಮಾಡಿದ್ದರಷ್ಟೇ, ಆದ್ರೆ ಜೆಡಿಎಸ್ನೊಂದಿಗೆ ಹೊಂದಾಣಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.