ಕರ್ನಾಟಕ

karnataka

ETV Bharat / city

ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ... ಯುವ ಕಾಂಗ್ರೆಸ್​ನಿಂದ ಶಿವಮೊಗ್ಗ ಡಿಸಿಗೆ ಮನವಿ - ಶಿವಮೊಗ್ಗ ಸುದ್ದಿ

ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆತನ ಸಹಪಾಠಿಗಳು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ಸಂಬಂಧ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್​ನಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

youth congress
youth congress

By

Published : Dec 7, 2020, 7:32 PM IST

ಶಿವಮೊಗ್ಗ:ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಯುವ ಕಾಂಗ್ರೆಸ್​ನಿಂದ ಡಿಸಿಗೆ ಮನವಿ

ನಿನ್ನೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆತನ ಸಹಪಾಠಿಗಳು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇಂತಹ ಘಟನೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಗಿರುವುದು ಖಂಡನೀಯ. ಹಾಗಾಗಿ ಆಸ್ಪತ್ರೆಗೆ ಜಿಲ್ಲೆಯ ಸುತ್ತಮುತ್ತ ಹಾಗೂ ಹೊರ ಜಿಲ್ಲೆಯಿಂದ ಬರುವ ರೋಗಿಗಳಿಗೆ ಹಾಗೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿರುವುದು ಈ ಪ್ರಕರಣವನ್ನು ನೋಡಿದಾಗ ತಿಳಿಯುತ್ತದೆ. ಮುಖ್ಯಮಂತ್ರಿಗಳ ಜಿಲ್ಲೆಯಲ್ಲಿ ಇಂತಹ ಕೃತ್ಯ ನಡೆದಿದ್ದು ಆಡಳಿತದ ವೈಫಲ್ಯವನ್ನು ತೋರಿಸುತ್ತದೆ.

ಇದನ್ನೂ ಓದಿ:ಊಟ ಕೊಡಿಸ್ತೀನೆಂದು ಆಕೆಯನ್ನೇ ತಿಂದುಂಡರು.. ಜಿಲ್ಲಾಸ್ಪತ್ರೆ ಕಾಮುಕ ಮತ್ತವನ ಗ್ಯಾಂಗ್‌ನ ರಾಕ್ಷಸಿ ಕೃತ್ಯ

ಕಳೆದ ವಾರ ಇದೇ ರೀತಿಯ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಸಹ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಹಾಗೂ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕಾದ ಸರ್ಕಾರ ಕಣ್ಣು ಮುಚ್ಚಿ ಕುಳಿತಿರುವುದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಹಾಗಾಗಿ ಕೂಡಲೇ ಸರ್ಕಾರ ಎರಡೂ ಪ್ರಕರಣದಲ್ಲಿ ಕೃತ್ಯವೆಸಗಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ABOUT THE AUTHOR

...view details