ಶಿವಮೊಗ್ಗ:ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ ಕಮಿಷನ್ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಲ್ಲೇಶ್ವರ ನಗರದಲ್ಲಿರುವ ಸಚಿವರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ಈಶ್ವರಪ್ಪ ಮನೆ ಮುತ್ತಿಗೆ ಹಾಕಲೆತ್ನಿಸಿದ ಯುವ ಕಾಂಗ್ರೆಸ್ಸಿಗರ ವಶ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ಮಾಧ್ಯಮಗಳಿಗೆ ಡೆತ್ನೋಟ್ ಇರುವ ವಾಟ್ಸ್ಆ್ಯಪ್ ಕಳಿಸಿದ್ದಾರೆ. ಇದರಲ್ಲಿ ಸಚಿವ ಈಶ್ವರಪ್ಪ ಅವರು ನನ್ನ ಸಾವಿಗೆ ಕಾರಣ ಎಂದು ನಮೂದಿಸಿದ್ದಾರೆ. ಹೀಗಾಗಿ, ಗುತ್ತಿಗೆದಾರನ ಸಾವಿಗೆ ಕಾರಣರಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು.
ಅಲ್ಲದೇ ಪ್ರಕರಣದಲ್ಲಿ ಅವರನ್ನು ಬಂಧಿಸಬೇಕು ಎಂದು ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಿ ಆಗ್ರಹಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಚಿವರ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.
ಸಚಿವ ಈಶ್ವರಪ್ಪ ಮನೆ ಮುತ್ತಿಗೆ ಹಾಕಲೆತ್ನಿಸಿದ ಯುವ ಕಾಂಗ್ರೆಸ್ಸಿಗರ ವಶ ಯುವ ಕಾಂಗ್ರೆಸ್ಸಿಗರ ವಶ:ಸಚಿವ ಈಶ್ವರಪ್ಪ ಮನೆ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ರೈಲ್ವೆ ಗೇಟ್ ಬಳಿಯೇ ತಡೆದರು. ಪೊಲೀಸರು ಬ್ಯಾರಿಕೇಡ್ ಹಾಕಿ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯುವ ಯತ್ನ ಮಾಡಿದರು. ಅದರೂ, ಕೆಲ ಕಾರ್ಯಕರ್ತರು ಬ್ಯಾರಿಕೇಡ್ ದಾಟಿ ಸಚಿವ ಈಶ್ವರಪ್ಪ ಅವರ ಮನೆಯ ಕಡೆ ಓಡಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು.
ಇನ್ನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್ ರೈಲು ಹಳಿಯ ಮೇಲೆ ಮಲಗಿ ಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಬ್ಯಾರಿಕೇಡ್ ನೂಕಿ ಪೊಲೀಸರನ್ನು ತಳ್ಳಿ ಈಶ್ವರಪ್ಪ ಮನೆ ಕಡೆ ಹೋಗಲು ಯತ್ನಿಸಿದ 40 ಕ್ಕೂ ಅಧಿಕ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.
ಓದಿ:ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ.. ಬೆಳಗಾವಿಯ ಸಂತೋಷ್ ಪಾಟೀಲ್ ಆತ್ಮಹತ್ಯೆ