ತುಮಕೂರು: ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಏಪ್ರಿಲ್‌ವರೆಗೆ ಪೋಕ್ಸೋ ಕಾಯ್ದೆಯಡಿ 169 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 28 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗಿದ್ದು, 31 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಕಲ್ಯಾಣ ಸಮಿತಿ ಬೀದಿ ಬದಿ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ 138 ಪ್ರಕರಣಗಳು ಬಾಕಿ ಉಳಿದಿವೆ. ಶಿಕ್ಷೆಯಾದ ಮೂರು ಪ್ರಕರಣಗಳ ಪೈಕಿ ಎರಡರಲ್ಲಿ ತಲಾ 6 ಲಕ್ಷ ಹಾಗೂ ಒಂದು ಪ್ರಕರಣದಲ್ಲಿ ಒಂದು ಲಕ್ಷ ಪರಿಹಾರ ನೀಡಲಾಗಿದೆ ಎಂದು ಹೇಳಿದರು.