ಕರ್ನಾಟಕ

karnataka

ETV Bharat / city

ಉಕ್ರೇನ್​​ನಲ್ಲಿ ಸಿಲುಕಿದ ತುಮಕೂರಿನ 24 ಮಂದಿ ವಿದ್ಯಾರ್ಥಿಗಳು

ಉಕ್ರೇನಿನಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನಲೆಯಲ್ಲಿ ಈಗಾಗಲೇ ತುಮಕೂರಿನ ಮೂವರು ವಿದ್ಯಾರ್ಥಿಗಳನ್ನು ಉಕ್ರೇನಿನಿಂದ ಕರೆತರಲಾಗಿದೆ. ಒಟ್ಟು ತುಮಕೂರಿನ 27 ವಿದ್ಯಾರ್ಥಿಗಳು ಉಕ್ರೇನಿನಲ್ಲಿದ್ದು ಉಳಿದ 24 ವಿದ್ಯಾರ್ಥಿಗಳನ್ನು ಕರೆತರುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿರುವುದಾಗಿ ತುಮಕೂರಿನ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಹೇಳಿದ್ದಾರೆ.

24-students-from-tumakuru-who-are-stuck-in-ukraine
ತುಮಕೂರಿನ 24 ಮಂದಿ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ : ಜಿಲ್ಲಾಧಿಕಾರಿ ಪಾಟೀಲ್

By

Published : Mar 3, 2022, 6:56 AM IST

Updated : Mar 3, 2022, 8:00 AM IST

ತುಮಕೂರು:ತುಮಕೂರಿನ ಒಟ್ಟು 27 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ಈಗಾಗಲೇ ರೇಖಾ ಎಂಬ ವಿದ್ಯಾರ್ಥಿನಿ ಉಕ್ರೇನಿಂದ ತುಮಕೂರಿಗೆ ಸುರಕ್ಷಿತವಾಗಿ ವಾಪಸಾಗಿದ್ದಾಳೆ. ಇನ್ನೂ 24 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ವಿವಿಧ ಕಡೆಗಳಲ್ಲಿ ಸಿಲುಕಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,ಜೊತೆಗೆ ವೇಣು ಮತ್ತು ಪ್ರಜ್ವಲ್ ಎಂಬ ಇಬ್ಬರು ವಿದ್ಯಾರ್ಥಿಗಳು ಈಗಾಗಲೇ ದೆಹಲಿ ತಲುಪಿದ್ದಾರೆ. ಅವರು ಶೀಘ್ರದಲ್ಲೇ ತುಮಕೂರಿಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ. ಕೆಲ ವಿದ್ಯಾರ್ಥಿಗಳು ಉಕ್ರೇನ್ ಗಡಿಯನ್ನು ದಾಟಿದ್ದಾರೆ. ಇನ್ನು ಕೆಲವರು ದಾಟಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೇ ಇನ್ನೂ ಕೆಲ ವಿದ್ಯಾರ್ಥಿಗಳು ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಜಿಲ್ಲೆಯ ವಿದ್ಯಾರ್ಥಿಗಳ ಪೋಷಕರನ್ನು ನಿರಂತರವಾಗಿ ಜಿಲ್ಲಾಡಳಿತದ ವತಿಯಿಂದ ಸರ್ಕಾರದ ಸೂಚನೆಯಂತೆ ಸಂಪರ್ಕದಲ್ಲಿ ಇಟ್ಟುಕೊಳ್ಳಲಾಗಿದೆ.

ತುಮಕೂರಿನ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡುತ್ತಿರುವುದು..

ಓದಿ :ಮೋದಿ-ಪುಟಿನ್​​ ಮಾತುಕತೆ: ಭಾರತೀಯ ಪ್ರಜೆಗಳ ಸುರಕ್ಷಿತ ಸ್ಥಳಾಂತರದ ಬಗ್ಗೆ ಮಹತ್ವದ ಚರ್ಚೆ

Last Updated : Mar 3, 2022, 8:00 AM IST

ABOUT THE AUTHOR

...view details