ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಇದುವರೆಗೂ 260 ಮಂದಿ ಪೊಲೀಸ್ ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದರು. ಇನ್ನು 24 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ತಿಳಿಸಿದ್ದಾರೆ.
2ನೇ ಅಲೆಯಲ್ಲಿ ಜಿಲ್ಲೆಯಲ್ಲಿ 260 ಪೊಲೀಸ್ ಸಿಬ್ಬಂದಿಗೆ ಸೋಂಕು: ಪೊಲೀಸ್ ವರಿಷ್ಠಾಧಿಕಾರಿ - tumakuru latest news
ಇಲಾಖೆಯಲ್ಲಿ ಸುಮಾರು 2000 ಮಂದಿ ಸಿಬ್ಬಂದಿ ಇದ್ದಾರೆ. ಅವರಲ್ಲಿ 50 ಮಂದಿ ಹೊರತುಪಡಿಸಿ ಎಲ್ಲರೂ ವ್ಯಾಕ್ಸಿನ್ ಪಡೆದಿದ್ದಾರೆ. ಹೀಗಾಗಿ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿರುವುದಿಲ್ಲ. ಅಲ್ಲದೇ ಸ್ವಲ್ಪ ಮಟ್ಟಿಗೆ ಸೋಂಕು ತಗುಲಿದ್ದರೂ ಗುಣಮುಖರಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿ, ಇಲಾಖೆಯಲ್ಲಿ ಸುಮಾರು 2000 ಮಂದಿ ಸಿಬ್ಬಂದಿ ಇದ್ದಾರೆ. ಅವರಲ್ಲಿ 50 ಮಂದಿ ಹೊರತುಪಡಿಸಿ ಎಲ್ಲರೂ ವ್ಯಾಕ್ಸಿನ್ ಪಡೆದಿದ್ದಾರೆ. ಹೀಗಾಗಿ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿರುವುದಿಲ್ಲ. ಅಲ್ಲದೇ ಸ್ವಲ್ಪ ಮಟ್ಟಿಗೆ ಸೋಂಕು ತಗುಲಿದ್ದರೂ ಗುಣಮುಖರಾಗಿದ್ದಾರೆ. ಸೋಂಕಿನ ಮೊದಲ ಆಲೆಗಿಂತ 2ನೆ ಅಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲಾಗಿತ್ತು ಎಂದು ಹೇಳಿದ್ದಾರೆ.
ಒಟ್ಟಾರೆ ಪೊಲೀಸರು ಅತಿ ಹೆಚ್ಚು ಸುರಕ್ಷಿತರಾಗಿದ್ದಾರೆ. ಪೊಲೀಸ್ ಕುಟುಂಬದವರನ್ನು ಸುರಕ್ಷಿತರಾಗಿಸಿದ್ದೇವೆ. ಶೇ 70 ಕುಟುಂಬ ಸದಸ್ಯರಿಗೂ ವ್ಯಾಕ್ಸಿನೇಷನ್ ಮಾಡಿಸಲಾಗಿದೆ. ಚೆಕ್ ಪೋಸ್ಟ್ ಗಳಲ್ಲಿ ಕೆಲಸ ಮಾಡುವವರನ್ನು ವ್ಯವಸ್ಥಿತವಾಗಿ ಸುರಕ್ಷಿತ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.