ಕರ್ನಾಟಕ

karnataka

ETV Bharat / city

ತುಮಕೂರು; ಪಾಸಿಟಿವಿಟಿ ದರ ಶೇ 8ಕ್ಕೆ ಕುಸಿತ, ಲಾಕ್​ಡೌನ್ ನಿಯಮ ಸಡಿಲಿಕೆ - ತುಮಕೂರು ಇತ್ತೀಚಿನ ಸುದ್ದಿ

ತುಮಕೂರಿನಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ 8ಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಲಾಕ್​ಡೌನ್​ ನಿಯಮ ಸಡಿಲಗೊಳಿಸಲು ನಿರ್ಧಾರ ಕೈಗೊಂಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ

By

Published : Jun 12, 2021, 4:35 PM IST

ತುಮಕೂರು:ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ 8ಕ್ಕೆ ಕುಸಿದಿದ್ದು ಪರಿಸ್ಥಿತಿ ಹತೋಟಿಗೆ ಬಂದಿದೆ. ಹೀಗಾಗಿ ಲಾಕ್​ಡೌನ್ ನಿಯಮಾವಳಿಯನ್ನು ಸಡಿಲಗೊಳಿಸಲು ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2ಗಂಟೆಗೆವರೆಗೆ ಸೇವಾ ವಲಯದ ಚಟುವಟಿಕೆಯನ್ನು ವಿಸ್ತರಿಸಲಾಗುವುದು. ಹಣ್ಣು, ತರಕಾರಿ, ದಿನಸಿ ಅಂಗಡಿಗಳ ವಹಿವಾಟು ನಡೆಯಲಿದೆ. ಮಧ್ಯಾಹ್ನ 2 ಗಂಟೆ ನಂತರ ಯಾವುದೇ ಚಟುವಟಿಕೆಗೆ ಅವಕಾಶವಿರುವುದಿಲ್ಲ. ಇನ್ನು ಪೊಲೀಸರಿಗೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದರು.

ಸೇವಾ ವಲಯದಲ್ಲಿ ಬರುವಂತಹ ಚಿನ್ನ, ಬೆಳ್ಳಿ ಅಂಗಡಿ, ಬಟ್ಟೆ ಅಂಗಡಿ ಹಾಗೂ ವಾಹನಗಳ ರಿಪೇರಿಗಳ ವರ್ಕ್​ ಶಾಪ್​ಗಳನ್ನು ಮಧ್ಯಾಹ್ನ 2 ಗಂಟೆವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಎಲ್ಲಾ ಬಂದ್ ಆಗಿರಲಿವೆ. ಮದುವೆ ಕಾರ್ಯಕ್ರಮದಲ್ಲಿ 40 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೊಟೆಲ್, ಕಲ್ಯಾಣ ಮಂಟಪ, ಶಾಲಾ ಕಾಲೇಜು, ಥಿಯೇಟರ್​ಗಳಲ್ಲಿ ಜನ ಸೇರಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ABOUT THE AUTHOR

...view details