ಕರ್ನಾಟಕ

karnataka

ETV Bharat / city

ನಿಗದಿಯಂತೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಕ್ರಿಮಿನಲ್ ಕೇಸ್: ಸಚಿವ ಭೈರತಿ ಬಸವರಾಜ್ - case if the work is not completed

ಈ ಹಿಂದೆ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸರಿಯಾಗಿ ಕೆಲಸ ಮಾಡದಂತಹ ಅಧಿಕಾರಿಗಳ ಕುರಿತು ಮಾಹಿತಿ ಪಡೆದು ಅವರ ವಿರುದ್ಧ ಕ್ರಮ ಕೈಗೊಂಡಿದ್ದೇನೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಬಸವರಾಜ್ ಹೇಳಿದರು.

ಭೈರತಿ ಬಸವರಾಜ್
ಭೈರತಿ ಬಸವರಾಜ್

By

Published : Jan 6, 2021, 3:39 PM IST

ತುಮಕೂರು:ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ನಿರ್ಲಕ್ಷ್ಯ ತೋರುವ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಬಸವರಾಜ್ ಹೇಳಿದರು.

ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಹಿಂದೆ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸರಿಯಾಗಿ ಕೆಲಸ ಮಾಡದಂತಹ ಅಧಿಕಾರಿಗಳ ಕುರಿತು ಮಾಹಿತಿ ಪಡೆದು ಅವರ ವಿರುದ್ಧ ಕ್ರಮ ಕೈಗೊಂಡಿದ್ದೇನೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಭೈರತಿ ಬಸವರಾಜ್

ಸಚಿವನಾದ ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಸಮಸ್ಯೆಗಳನ್ನು ಅರಿತು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ ಎಂದರು.

10.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ವಸತಿ ಸಮುಚ್ಚಯವನ್ನು ಜನವರಿ 10ರಂದು ತುಮಕೂರು ನಗರದಲ್ಲಿ ಉದ್ಘಾಟನೆ ಮಾಡುವುದಾಗಿ ತಿಳಿಸಿದರು.

ABOUT THE AUTHOR

...view details