ಕರ್ನಾಟಕ

karnataka

ETV Bharat / city

SSLC ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಆತ್ಮಹತ್ಯೆಗೆ ಯತ್ನ: ವಿದ್ಯಾರ್ಥಿನಿಗೆ ಧೈರ್ಯ ತುಂಬಿದ ಶಿಕ್ಷಣ ಸಚಿವರು - ಸಚಿವ ಸುರೇಶ್ ಕುಮಾರ್

SSLC ಪರೀಕ್ಷೆ ಬರೆಯಲು ಅವಕಾಶ ಸಿಗದ ಕಾರಣ ಆತ್ಮಹತ್ಯೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ, ಧೈರ್ಯ ಹೇಳಿದರು.

Tumkur
ವಿದ್ಯಾರ್ಥಿನಿಗೆ ಧೈರ್ಯ ತುಂಬಿದ ಸುರೇಶ್ ಕುಮಾರ್

By

Published : Jul 17, 2021, 1:14 PM IST

Updated : Jul 17, 2021, 1:28 PM IST

ತುಮಕೂರು: ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ, ಧೈರ್ಯ ಹೇಳಿದರು.

SSLC ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಆತ್ಮಹತ್ಯೆಗೆ ಯತ್ನ: ವಿದ್ಯಾರ್ಥಿನಿಗೆ ಧೈರ್ಯ ತುಂಬಿದ ಶಿಕ್ಷಣ ಸಚಿವರು

ಜಿಲ್ಲೆ ಕೊರಟಗೆರೆ ಪಟ್ಟಣದ ಹನುಮಂತಪುರ ಬಡಾವಣೆಯ ನಿವಾಸಿಯಾದ ಬಾಲಕಿ ಉತ್ತರ ಕನ್ನಡ ಜಿಲ್ಲೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ನೋಂದಣಿ ಅರ್ಜಿ ಸಲ್ಲಿಸಿರಲಿಲ್ಲ. ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಬೇಕಾದ ದಿನಾಂಕ ಕೂಡ ಪೂರ್ಣಗೊಂಡಿರುವುದರಿಂದ ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಿಲ್ಲ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಬಾಲಕಿಗೆ ತಿಳಿಸಿದೆ.

ಇದರಿಂದ ಕಂಗೆಟ್ಟ ವಿದ್ಯಾರ್ಥಿನಿ ಇಂದು ಬೆಳಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವಿಷಯ ತಿಳಿದ ಸಚಿವ ಸುರೇಶ್ ಕುಮಾರ್, ಬೆಂಗಳೂರಿನಿಂದ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಹನುಮಂತಪುರ ಬಡಾವಣೆಯಲ್ಲಿ ವಾಸವಾಗಿರುವ ವಿದ್ಯಾರ್ಥಿನಿ ಮನೆಗೆ ದೌಡಾಯಿಸಿದ್ದಾರೆ.

ಅಲ್ಲದೇ, ವಿದ್ಯಾರ್ಥಿನಿ ಗ್ರೀಷ್ಮಾ ಹಾಗೂ ಆಕೆಯ ಪೋಷಕರಿಗೆ ಧೈರ್ಯ ಹೇಳಿದರು. ಅನೇಕ ತಾಂತ್ರಿಕ ಕಾರಣಗಳಿಂದ ಈ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ. ಆಗಸ್ಟ್​ನಲ್ಲಿ ನಡೆಯಲಿರುವ ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಡುವುದಾಗಿ ಸಮಾಧಾನಪಡಿಸಿದ್ದಾರೆ.

Last Updated : Jul 17, 2021, 1:28 PM IST

ABOUT THE AUTHOR

...view details