ತುಮಕೂರು: ಸಿನಿಮಾ ನೋಡಿ ಪ್ರಭಾವಿತನಾದ ಯುವಕನೊಬ್ಬ ಮುಕ್ತಿ ಬೇಕೆಂದು ಹುಚ್ಚು ಸಾಹಸದಿಂದ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಂಡವಾಡಿ ರಸ್ತೆಯಲ್ಲಿ ನಡೆದಿದೆ.
ಸಿನಿಮಾ ನೋಡಿ ಮುಕ್ತಿ ಬೇಕೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ - Tumkur Suicide news
ಸಿನಿಮಾ ನೋಡಿ ಅದರಿಂದ ಪ್ರಭಾವಿತನಾದ 22 ವರ್ಷದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬಳಿಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕ
22 ವರ್ಷದ ಯುವಕ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಬಳಿಕ ಶಾಖ ತಾಳಲಾರದೇ ರಸ್ತೆಯಲ್ಲೇ ಬಿದ್ದು ಕಿರಿಚಾಡುತ್ತಿದ್ದ. ಇದನ್ನು ನೋಡಿದ ಸಾರ್ವಜನಿಕರು, ಆ್ಯಂಬುಲೆನ್ಸ್ಗೆ ಕರೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಭೀಮಾನದಿಯಲ್ಲಿ ಪುಣ್ಯ ಸ್ನಾನಕ್ಕಿಳಿದ ಯುವಕ ನೀರುಪಾಲು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Last Updated : Aug 11, 2022, 1:05 PM IST