ತುಮಕೂರು:ಎಲ್ಕೆಜಿ-ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭಿಸುವ ಮೂಲಕ ಉನ್ನತೀಕರಣ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿಯಲ್ಲಿ ಎಲ್ಕೆಜಿ-ಯುಕೆಜಿ ಪ್ರಾರಂಭಕ್ಕೆ ಆಗ್ರಹಿಸಿ ಪ್ರತಿಭಟನೆ - ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ-ಯುಕೆಜಿ ಶಿಕ್ಷಣ ಒದಗಿಸಬೇಕು
ಎಲ್ಕೆಜಿ-ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭಿಸುವ ಮೂಲಕ ಉನ್ನತೀಕರಣ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
![ಅಂಗನವಾಡಿಯಲ್ಲಿ ಎಲ್ಕೆಜಿ-ಯುಕೆಜಿ ಪ್ರಾರಂಭಕ್ಕೆ ಆಗ್ರಹಿಸಿ ಪ್ರತಿಭಟನೆ kn_tmk_01_citu_protest_script_KA10010](https://etvbharatimages.akamaized.net/etvbharat/prod-images/768-512-5278213-thumbnail-3x2-ckdjpg.jpg)
ಅಂಗನವಾಡಿಯಲ್ಲಿ ಎಲ್ಕೆಜಿ-ಯುಕೆಜಿ ಪ್ರಾರಂಭಕ್ಕೆ ಆಗ್ರಹ: ಕಾರ್ಯಕರ್ತೆಯರ ಪ್ರತಿಭಟನೆ
ಅಂಗನವಾಡಿಯಲ್ಲಿ ಎಲ್ಕೆಜಿ-ಯುಕೆಜಿ ಪ್ರಾರಂಭಕ್ಕೆ ಆಗ್ರಹಿಸಿ ಪ್ರತಿಭಟನೆ
ಸಿಐಟಿಯು ನೇತೃತ್ವದಲ್ಲಿ ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನಾ ಮೆರೆವಣಿಗೆ ನಡೆಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ-ಯುಕೆಜಿ ಶಿಕ್ಷಣ ಒದಗಿಸಬೇಕು. ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಇಡುಗಂಟು ತಕ್ಷಣ ಬಿಡುಗಡೆ ಮಾಡಬೇಕು. ನಿವೃತ್ತಿ ಹೊಂದಿದವರಿಗೆ ಕನಿಷ್ಠ 6,000 ರೂ. ಪಿಂಚಣಿ ನೀಡಬೇಕು ಎಂದು ಆಗ್ರಹಹಿಸಿ ಪ್ರತಿಭಟನೆ ನಡೆಸಲಾಯಿತು.