ತುಮಕೂರು: ಒಬ್ಬನನ್ನು ಕೊಲೆ ಮಾಡಿ ಶವವನ್ನು ಕೆರೆಗೆ ಎಸೆದು ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಕುಮಾರ್ ಮತ್ತು ಗಂಗರಾಜ ಬಂಧಿತ ಆರೋಪಿಗಳು. ಇವರಿಬ್ಬರು ಕುಣಿಗಲ್ ತಾಲೂಕಿನ ಬಿ ಹೊಸಳ್ಳಿ ಗ್ರಾಮದ ಆಂಜನಪ್ಪ (58) ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿದ್ದರು.
ಈ ಮೂವರು ಮದ್ಯ ಸೇವಿಸಿ ಆಮ್ಲೆಟ್ ತಿನ್ನುತ್ತಿದ್ದ ವೇಳೆ ಆಂಜನಪ್ಪ ಮತ್ತು ಗಂಗರಾಜು ನಡುವೆ ಜಗಳ ನಡೆದಿದೆ. ಈ ವೇಳೆ, ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿದ್ದು, ಗಂಗರಾಜುಗೆ ಆಂಜನಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ನಂತರ ಅಲ್ಲಿಂದ ತಪ್ಪಿಸಿಕೊಂಡು ಬಂದ ಗಂಗರಾಜು, ಹುಲಿಯೂರುದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದನು.