ತುಮಕೂರು:ಸಾರ್ವಜನಿಕ ವಿದ್ಯಾರ್ಥಿ ನಿಲಯದ ಕುಡಿಯುವ ನೀರಿನ ಟ್ಯಾಂಕ್ಗೆ ವಿಷ ಹಾಕಲು ಯತ್ನಿಸಿದ್ದ ವ್ಯಕ್ತಿಗೆ 7 ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ತಿಪಟೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.
2018ರ ಜನವರಿ 18ರಂದು ಶ್ರೀನಿವಾಸ್ ಎಂಬಾತ ಹುಳಿಯಾರು ಹೋಬಳಿಯಲ್ಲಿರುವ ಗುರುವಾಪುರದ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಆವರಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕಿಗೆ ವಿಷ ಬೆರೆಸಲು ಪ್ರಯತ್ನಿಸಿದ್ದ. ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಪೊಲೀಸರು ಈತನ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಬಿ.ಶಿವಕುಮಾರ್ ತೀರ್ಪು ನೀಡಿದ್ದಾರೆ.