ಕರ್ನಾಟಕ

karnataka

ETV Bharat / city

ಜೆಎನ್​​​​ಯು ವಿದ್ಯಾರ್ಥಿಗಳನ್ನು ರಾಷ್ಟ್ರೀಯರನ್ನಾಗಿ ಮಾಡಬೇಕಿದೆ: ಕಲ್ಲಡ್ಕ ಪ್ರಭಾಕರ್​​​ ಭಟ್ - ಜೆಎನ್​ಯು ವಿದ್ಯಾರ್ಥಿಗಳ ಮೇಲೆ ದಾಳಿ

ನಾಗರಿಕ ವೇದಿಕೆ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ತುಮಕೂರಿನಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್​ ಭಟ್​ ಅವರು, ಹಿಂದೂ ದೇಶದಲ್ಲಿರುವ ಎಲ್ಲರೂ ಹಿಂದೂಗಳೇ ಎಂದರು.

awareness about the citizen amendment act
ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಜಾಥಾ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಜಾಥಾ

By

Published : Jan 7, 2020, 4:07 PM IST

Updated : Jan 7, 2020, 4:24 PM IST

ತುಮಕೂರು:ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ರಾಷ್ಟ್ರೀಯರನ್ನಾಗಿ ಮಾಡುವಂತಹ ಮಹತ್ಕಾರ್ಯ ಆಗಬೇಕಿದೆ ಎಂದು ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟರು.

ನಾಗರಿಕ ವೇದಿಕೆಯಿಂದ ಆಯೋಜಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಜೆಎನ್​​ಯು ಅನ್ನು ದೇಶದ್ರೋಹಿಗಳನ್ನು ತಯಾರಿಸುವಂತಹ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯವನ್ನಾಗಿ ಮಾರ್ಪಾಟು ಮಾಡಲಾಗಿದೆ ಎಂದು ಆರೋಪಿಸಿದರು.

ಕಲ್ಲಡ್ಕ ಪ್ರಭಾಕರ್​​​ ಭಟ್

ವಿಶ್ವವಿದ್ಯಾಲಯಗಳಲ್ಲಿ ಅಕ್ಬರ್ ದಿ ಗ್ರೇಟ್ ಎಂಬಂತೆ ಬೋಧನೆ ಮಾಡಲಾಗಿದೆ. ಇಂತಹ ತಪ್ಪುಗಳನ್ನು ಸರಿ ಮಾಡಬೇಕಾದ ಅಗತ್ಯವೂ ಇದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಸಂಬಂಧ ಇಂತಹ ಗಲಾಟೆಗಳಿಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೆದರುವುದಿಲ್ಲ ಎಂದರು.

ಇನ್ನು, ದೇಶದ ಶಿಕ್ಷಣ ವ್ಯವಸ್ಥೆ ಕುರಿತು ಮಾತ್ರ ರಾಜ್ಯಗಳು ಪ್ರತ್ಯೇಕವಾಗಿ ನಿರ್ಧಾರ ಮಾಡಬಹುದು. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆ ದೇಶಕ್ಕೆ ಸಂಬಂಧಪಟ್ಟ ವಿಷಯ ಎಂದು ಕಲ್ಲಡ್ಕ ಪ್ರಭಾಕರ್​ ಭಟ್​ ಹೇಳಿದ್ರು.

Last Updated : Jan 7, 2020, 4:24 PM IST

ABOUT THE AUTHOR

...view details