ಕರ್ನಾಟಕ

karnataka

ETV Bharat / city

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ‌ ಬಾಳೆಹೊನ್ನೂರು - ತಿಪಟೂರು ಬಂದ್​ - ಬಜರಂಗದಳ ಹಾಗೂ ಹಿಂದೂ ಹಿತರಕ್ಷಣಾ ಸಮಿತಿ ಕರೆ ನೀಡಿರುವ ಬಂದ್

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ‌ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪಟ್ಟಣ ಹಾಗೇ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬಂದ್​ ಆಚರಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರತಿದೆ.

Praveen Nettar
ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ‌ ಬಾಳೆಹೊನ್ನೂರು - ತಿಪಟೂರು ಬಂದ್​

By

Published : Jul 29, 2022, 5:18 PM IST

ಚಿಕ್ಕಮಗಳೂರು:ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಮಲೆನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್​ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಇಂದು ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಪಟ್ಟಣದ ಜೆಸಿ ಸರ್ಕಲ್​ನಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಘೋಷಣೆ ಕೂಗಿ, ಪ್ರವೀಣ್ ಹತ್ಯೆಗೆ ಸೂಕ್ತ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು. ನಿನ್ನೆ ಕೊಪ್ಪ ಸೇರಿದಂತೆ ಜಯಪುರ, ಹರಿಹರಪುರ ಹೋಬಳಿ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು.

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ‌ ಬಾಳೆಹೊನ್ನೂರು - ತಿಪಟೂರು ಬಂದ್​

ಪ್ರವೀಣ್ ಹತ್ಯೆ ಖಂಡಿಸಿ ಸಚಿವ ಬಿ ಸಿ ನಾಗೇಶ್ ಕ್ಷೇತ್ರ ತಿಪಟೂರಿನಲ್ಲೂ ಬಂದ್ :ಪ್ರವೀಣ್ ಹತ್ಯೆ ಖಂಡಿಸಿ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಬಂದ್​ಗೆ ಕರೆ ನೀಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಜರಂಗದಳ ಹಾಗೂ ಹಿಂದೂ ಹಿತರಕ್ಷಣಾ ಸಮಿತಿ ಕರೆ ನೀಡಿರುವ ಬಂದ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,ಅಂಗಡಿ ಮುಂಗಟ್ಟುಗಳು ಮುಚ್ಚಿವೆ.

ಇನ್ನೊಂದೆಡೆ ವಾಹನಗಳ ಸಂಚಾರ ವಿರಳವಾಗಿದ್ದ ಹಿನ್ನೆಲೆಯಲ್ಲಿ ಕೆಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಇದರಿಂದಾಗಿ ದೂರದ ಊರುಗಳಿಂದ ಬಂದ ವಿದ್ಯಾರ್ಥಿಗಳು ನಡಿಗೆಯಲ್ಲೇ ವಾಪಾಸ್ ಆಗುತ್ತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ.

ಇದನ್ನೂ ಓದಿ :Breaking news... ಪ್ರವೀಣ್​ ಹತ್ಯೆ ಪ್ರಕರಣ ಎನ್​ಐಎ ತನಿಖೆಗೆ ವಹಿಸಲು ಸರ್ಕಾರದ ನಿರ್ಧಾರ

For All Latest Updates

ABOUT THE AUTHOR

...view details