ತುಮಕೂರು: ಪಂಚಮಸಾಲಿ ಸಮಾಜ ಹಾಗೂ ಲಿಂಗಾಯತ ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ನೀಡಬೇಕು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.
ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲಾತಿ ನೀಡಿ: ಜಯಮೃತ್ಯುಂಜಯ ಶ್ರೀಗಳಿಂದ ಒತ್ತಾಯ - Basava Jayamrutunjaya Swamiji press meet
ಲಿಂಗಾಯತ ಸಮುದಾಯಗಳಿಗೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಘೋಷಿಸ ಬೇಕು ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತೆ ಒತ್ತಾಯಿಸಿದ್ದಾರೆ.

ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವ ಜಯಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಠಿ
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯಗಳಿಗೆ ಮೀಸಲಾತಿ ಘೋಷಣೆ ಮಾಡದಿದ್ದರೆ ಪಂಚ ಲಕ್ಷ ಹೆಜ್ಜೆಗಳ ಬೃಹತ್ ಪಾದಯಾತ್ರೆ ನಡೆಸಲಾಗುವುದು. ಪಾದಯಾತ್ರೆಯನ್ನು ಕೂದಲ ಸಂಗಮದಿಂದ ಆರಂಭಿಸಿ ಬೆಂಗಳೂರಿನ ಆಡಳಿತ ಕಚೇರಿ ವರೆಗೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.