ತುಮಕೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ(Bear attack) ಹಿನ್ನೆಲೆ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ದುರ್ಗದ ಹಳ್ಳಿಯಲ್ಲಿ ನಡೆದಿದೆ.
ತುಮಕೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ - ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ
ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ಮಾರಣಾಂತಿಕ ದಾಳಿ ನಡೆಸಿರುವ ಘಟನೆ ತುಮಕೂರು(Tumkur) ಜಿಲ್ಲೆ ದುರ್ಗದ ಹಳ್ಳಿಯಲ್ಲಿ ನಡೆದಿದೆ.
ತಿಮ್ಮರಾಜು ಗಾಯಗೊಂಡಿರುವವರು. ಇಂದು ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಕರಡಿ ಅವರ ಕಾಲು ಹಾಗೂ ಕೈಗಳನ್ನು ಕಚ್ಚಿ ಗಾಯಗೊಳಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಗಾಯಗೊಂಡಿದ್ದ ತಿಮ್ಮರಾಜು ಅವರನ್ನು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ತಿಮ್ಮರಾಜು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ದತ್ತ ಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ಖಂಡಿಸಿ ಕೋಲಾರ ಬಂದ್ಗೆ ಕರೆ