ತುಮಕೂರು: ಜಿಲ್ಲೆಯ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲೂಕಿನ ಸುತ್ತಮುತ್ತಲ ಪ್ರದೇಶದಲ್ಲಿ ಕರಡಿಗಳ ಹಾವಳಿ ಮಿತಿಮೀರಿದೆ. ಗುಂಪುಗುಂಪಾಗಿ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿವೆ.
ಕೊರಟಗೆರೆ ತಾಲೂಕಿನ ಹುಳಸೊಪ್ಪನಹಳ್ಳಿಯ ರಮೇಶ್ ಎಂಬುವರ ತೋಟದ ಮನೆಯ ಹತ್ತಿರ 3 ಕರಡಿಗಳು ನಿತ್ಯ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ವೇಳೆ ಮನೆಯಿಂದ ಹೊರಗೆ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕರಡಿಗಳನ್ನು ಜನವಸತಿ ಪ್ರದೇಶದಿಂದ ಸ್ಥಳಾಂತರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.