ತುಮಕೂರು: ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಶಿರಾ ನಗರದ ಇಬ್ಬರು ಯುವಕರಿಗೆ 15 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಮಹಮ್ಮದ್ ಅಬುತಹಿರ್ ಹಾಗೂ ಮೆಹಬೂಬ್ ಪಾಷಾ ಎಂಬಿಬ್ಬರು ಉಜ್ಜನಕುಂಟೆ ಬಳಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು.
ತುಮಕೂರು: ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರಿಗೆ 15 ಸಾವಿರ ರೂ. ದಂಡ
ಹಿರಿಯೂರು-ಶಿರಾ ರಾಷ್ಟ್ರೀಯ ಹೆದ್ದಾರಿ ಉಜ್ಜನಕುಂಟೆ ಬಳಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರಿಗೆ ನ್ಯಾಯಾಲಯ 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ತುಮಕೂರು: ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರಿಗೆ 15 ಸಾವಿರ ರೂ. ದಂಡ
ಸಾರ್ವಜನಿಕರು ಮೊಬೈಲ್ನಲ್ಲಿ ವಿಡಿಯೋ ಮಾಡಿ ತಾವರೆಕೆರೆ ಪೊಲೀಸರಿಗೆ ಕಳುಹಿಸಿದ್ದರು. ಈ ವಿಡಿಯೋ ಆಧರಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ವ್ಹೀಲಿಂಗ್ ಮಾಡುತ್ತಿದ್ದನ್ನು ಯುವಕರು ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದ್ದು, ನ್ಯಾಯಾಲಯ ದಂಡ ವಿಧಿಸಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ನಿಲ್ಲದ ವ್ಹೀಲಿಂಗ್ ಪುಂಡರ ಹಾವಳಿ; ಸವಾರರ ಜೀವಕ್ಕೆ ಸಂಚಕಾರ
Last Updated : Jun 21, 2022, 2:56 PM IST