ತುಮಕೂರು :ಪ್ರೀತಿ ಗೀತಿ ಸರಿಯಲ್ಲ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಕುಪಿತಗೊಂಡ ಯುವಕ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೊಮ್ಮಡಿಗೆರೆ ಗ್ರಾಮದಲ್ಲಿ ನಡೆದಿದೆ.
ತುಮಕೂರು: 21ಕ್ಕೆ ಪ್ರೀತಿ-ಗೀತಿ ಯಾಕೆ ಎಂದಿದ್ದಕ್ಕೆ ಡೀಸೆಲ್ ಸುರಿದುಕೊಂಡು ಯುವಕ ಸಾವು
ಈ ವಯಸ್ಸಿನಲ್ಲಿ ಪ್ರೀತಿಯಾಕೆ ಎಂದು ಬುದ್ಧಿವಾದ ಹೇಳಿದ್ದಕ್ಕೆ ಯುವಕನೋರ್ವ ಕೋಪಗೊಂಡು ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಬಿ.ಎಂ. ಹನುಮಂತ (21) ಆತ್ಮಹತ್ಯೆಗೆ ಶರಣಾದ ಯುವಕ. ಹನುಮಂತ ಕಳೆದ ಒಂದು ವರ್ಷದಿಂದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಈ ವಯಸ್ಸಿನಲ್ಲಿ ಪ್ರೀತಿ ಗೀತಿ ಯಾಕೆ ಎಂದು ಪೋಷಕರು ಬುದ್ಧಿವಾದ ಹೇಳಿದ್ದಾರೆ. ಇದ್ರಿಂದ ಸಿಟ್ಟಿಗೆದ್ದ ಹನುಮಂತ, ಡಿ.17ರಂದು ಪಟ್ಟಣದ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ.
ಪ್ರೀತಿ ವಿಚಾರಕ್ಕೆ ಯುವಕ ಆತ್ಮಹತ್ಯೆ : ಸ್ಥಳದಲ್ಲಿದ್ದವರು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಡಿ.22ರಂದು ರಾತ್ರಿ ಮೃತಪಟ್ಟಿದ್ದಾನೆ. ಈ ಸಂಬಂಧ ಹನುಮಂತನ ಪೋಷಕರು ಕುಣಿಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.