ಕರ್ನಾಟಕ

karnataka

ETV Bharat / city

ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ಬಿಟ್​ ಕಾಯಿನ್​ ಪ್ರಕರಣದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ : ಯಡಿಯೂರಪ್ಪ - bs yadiyurappa statement on bitcoin scam

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳಲ್ಲ. ಯಾರು ಅದರಲ್ಲಿ ಭಾಗಿಯಾಗಿದ್ದಾರೋ ಅವರ ಮೇಲೆ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ನರೇಂದ್ರ ಮೋದಿ (PM Narendra modi) ಗಮನಕ್ಕೂ ಇದು ಬಂದಿದೆ. ಖಂಡಿತ ಇದು ಬಹಳ ಪ್ರಮುಖವಾದ ವಿಚಾರ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುತ್ತಾರೆ..

bs-yadiyurappa-statement-on-bitcoin-scam
ಯಡಿಯೂರಪ್ಪ

By

Published : Nov 12, 2021, 9:11 PM IST

ತುಮಕೂರು : ಬಿಟ್ ಕಾಯಿನ್ ಪ್ರಕರಣಕ್ಕೆ (bitcoin scam) ಸಂಬಂಧಿಸಿದಂತೆ ತನಿಖೆಗೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yadiyurappa) ಹೇಳಿದ್ದಾರೆ.

ಬಿಟ್​ ಕಾಯಿನ್​ ಪ್ರಕರಣದ ಕುರಿತಂತೆ ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ ನೀಡಿರುವುದು..

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳಲ್ಲ. ಯಾರು ಅದರಲ್ಲಿ ಭಾಗಿಯಾಗಿದ್ದಾರೋ ಅವರ ಮೇಲೆ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು.

ಪ್ರಧಾನಿ ನರೇಂದ್ರ ಮೋದಿ (PM Narendra modi) ಗಮನಕ್ಕೂ ಇದು ಬಂದಿದೆ. ಖಂಡಿತ ಇದು ಬಹಳ ಪ್ರಮುಖವಾದ ವಿಚಾರ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದರು.

ಸಿಎಂ, ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಯಾವುದೇ ಸುದ್ದಿ ಇಲ್ಲ. ಈಗ ತಾನೇ ನಾನು ಜಗದೀಶ್ ಶೆಟ್ಟರ್ ಜೊತೆ ಮಾತನಾಡಿದ್ದೇನೆ.

ಅವರು ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. ಬೊಮ್ಮಾಯಿ ಒಳ್ಳೆ ಕೆಲಸ ಮಾಡುತಿದ್ದಾರೆ. ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ತಿಳಿಸಿದರು.

ABOUT THE AUTHOR

...view details